ಮಡಿಕೇರಿ, ಫೆ. ೬: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ವತಿಯಿಂದ ಸಹಕಾರ ಸಂಘ, ಸಂಸ್ಥೆಗಳ ಸಿಬ್ಬಂದಿಗಳಿಗೆ ನೀಡಲಾಗುವ ದೂರ ಶಿಕ್ಷಣ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ೨೪ ವಾರಗಳ ಅವಧಿಯದ್ದಾಗಿದ್ದು, ಕೊಡಗು ಮತ್ತು ಹಾಸನ ಜಿಲ್ಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಕೇಂದ್ರದಲ್ಲಿ ಪ್ರವೇಶ ಪ್ರಾರಂಭವಾಗಿದ್ದು, ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಪಡೆದು ಪ್ರವೇಶ ಪಡೆಯಲು ತಾ.೧೫ ಕೊನೆಯ ದಿನಾಂಕವಾಗಿರುತ್ತದೆ, ಆನ್‌ಲೈನ್ ಮೂಲಕ ಸಲ್ಲಿಸುವವರು ತಿತಿತಿ.ಞsಛಿಜಿಜಛಿm.ಛಿo.iಟಿ ಲಿಂಕ್ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲೆ ಡಾ.ರೇಣುಕಾ ತಿಳಿಸಿದ್ದಾರೆ.