ಮಡಿಕೇರಿ, ಫೆ. ೬: ಭಾಗಮಂಡಲದ ಶ್ರೀ ಕಾವೇರಿ ವಿದ್ಯಾ ಸಂಘವನ್ನು ಆದಿ ಚುಂಚನಗಿರಿ ಮಹಾ ಸಂಸ್ಥಾನದ ಸುಪರ್ದಿಗೆ ಒಪ್ಪಿಸಲಾಗು ತ್ತಿದ್ದು, ಗುರುವಂದನೆ ಮತ್ತು ಸಮರ್ಪಣಾ ಸಮಾರಂಭ ತಾ. ೮ ರಂದು (ನಾಳೆ) ನಡೆಯಲಿದೆ ಎಂದು ವಿದ್ಯಾ ಸಂಘದ ಅಧ್ಯಕ್ಷ ಹೊಸೂರು ಸತೀಶ್‌ಕುಮಾರ್ ತಿಳಿಸಿದ್ದಾರೆ.
ಶ್ರೀ ಡಾ. ನಿರ್ಮಲಾನಂದ ಮಹಾಸ್ವಾಮಿಗಳ ಸಮ್ಮುಖದಲ್ಲಿ ಶ್ರೀ ಆದಿ ಚುಂಚನಗಿರಿ ಮಠಕ್ಕೆ ವಿದ್ಯಾ ಸಂಘವನ್ನು ಹಸ್ತಾಂತರಿಸುತ್ತಿರುವುದಾಗಿ ಅವರು ಹೇಳಿದ್ದಾರೆ.
ಸೋಮವಾರ ಬೆಳಿಗ್ಗೆ ೧೧ ಗಂಟೆಗೆ ಶ್ರೀಕಾವೇರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಶ್ರೀ ಡಾ. ನಿರ್ಮಲಾನಂದ ಮಹಾ ಸ್ವಾಮೀಜಿಗಳು ಸಮರ್ಪಣಾ ಸಮಾರಂಭವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಆದಿ ಚುಂಚನಗಿರಿ ಮಹಾ ಸಂಸ್ಥಾನದ ಶ್ರೀ ಶಂಭುನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಶಾಸಕ ಕೆ.ಜಿ. ಬೋಪಯ್ಯ ಹಾಗೂ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಪಾಲ್ಗೊಳ್ಳಲಿದ್ದಾರೆ.
ವಿದ್ಯಾ ಸಂಘದ ಸ್ಥಳ ದಾನಿಗಳಾದ ಚೆದುಕಾರು ಮತ್ತು ಹೊಸಗದ್ದೆ ಕುಟುಂಬದ ಪಟ್ಟೆದಾರರಿಗೆ ಸಮಾರಂಭದಲ್ಲಿ ಗೌರವ ಸಮರ್ಪಣೆ ಮಾಡಲಾಗುವುದು. ಅಲ್ಲದೆ, ಗುರುವಂದನಾ ಕಾರ್ಯಕ್ರಮ ಕೂಡ ನಡೆಯಲಿದೆ ಎಂದು ಸತೀಶ್ ಕುಮಾರ್ ಮಾಹಿತಿ ನೀಡಿದ್ದಾರೆ.