ಮಡಿಕೇರಿ, ಫೆ. ೬: ಹೆಬ್ಬೆಟ್ಟಗೇರಿ ವಿಸ್ಮಯ ಕ್ರಿಕೆರ‍್ಸ್ ವತಿಯಿಂದ ಕೆ.ನಿಡುಗಣೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಇಂದು(ಫೆ.೭) ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ ೮ ಗಂಟೆಗೆ ಕೆ.ನಿಡುಗಣೆ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೊಕ್ಕಲೇರ ಕೆ. ಅಯ್ಯಪ್ಪ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಉಪನ್ಯಾಸಕ ಎನ್.ಸಿ.ಸಿ. ಅಧಿಕಾರಿ ಡಾ.ಮೇಜರ್ ರಾಘವ್ ಅಧ್ಯಕ್ಷತೆ ವಹಿಸಲಿದ್ದಾರೆ.

ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ನಡೆದಿದ್ದು, ಒಟ್ಟು ೫ ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿವೆ. ಎಂದು ಆಯೋಜಕರಾದ ರಮೇಶ್, ದರ್ಶಿತ್, ಸುಜಿತ್, ದಿನೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.