ಮಡಿಕೇರಿ, ಫೆ. ೮: ನಬಾರ್ಡ್ನ ಸಹಯೋಗದೊಂದಿಗೆ ನಗರದ ಡಿ.ಸಿ.ಸಿ ಬ್ಯಾಂಕ್ ಕೇಂದ್ರ ಕಚೇರಿ ಸಭಾಂಗಣದಲ್ಲಿ ತಾ. ೯ ರಂದು (ಇಂದು) ಬೆಳಗ್ಗೆ ೧೦.೩೦ ಗಂಟೆಗೆ ಜಿಲ್ಲೆಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳಿಗೆ ಮೈಕ್ರೋ ಎ.ಟಿ.ಎಂ.ಗಳನ್ನು ವಿತರಿಸುವ ಕಾರ್ಯಕ್ರಮವು ಪ್ರಥಮ ಬಾರಿಗೆ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಪಿ. ಗಣಪತಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ ಸಿಇಒ ತಿಳಿಸಿದ್ದಾರೆ.
ರೈತರು ತಮ್ಮ ವ್ಯಾಪ್ತಿಯ ಸಹಕಾರ ಸಂಘಗಳ ಮೂಲಕ ಹಣಕಾಸಿನ ವ್ಯವಹಾರವನ್ನು ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.