ಮಡಿಕೇರಿ, ಫೆ. ೮: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ಭಾರತ ಸರ್ಕಾರದ ರಾಷ್ಟಿçÃಯ ವೃತ್ತಿ ಸೇವಾ ಯೋಜನೆಯ ಅಡಿಯಲ್ಲಿ ತಾ. ೧೦ ರಂದು ಬೆಳಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೩ ಗಂಟೆಯವರೆಗೆ ಸೋಮವಾರಪೇಟೆ ತಾಲೂಕು ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಜಿಲ್ಲಾ ಮಟ್ಟದ ಉದ್ಯೋಗ ಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ವಿವಿಧ ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸಿ ಸಂದರ್ಶನ ನಡೆಸಲಿದ್ದಾರೆ.
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಅಂತರ್ಜಾಲ ತಾಣದಲ್ಲಿರುವ hಣಣಠಿs://ಜಿoಡಿms.gಟe/ಓPರಿ೪zgಏಂಗಿರಿಡಿರಿmರಿಜಿಆ೯ ಎಂಬ ಲಿಂಕನ್ನು ಬಳಸಿಕೊಂಡು ನೋಂದಾಯಿಸಿಕೊಳ್ಳುವುದು. ಉದ್ಯೋಗಾಕಾಂಕ್ಷಿಗಳ ನೋಂದಣಿ ಹಾಗೂ ಸಂದರ್ಶನ ಉಚಿತ ವಾಗಿರುತ್ತದೆ. ಅಭ್ಯರ್ಥಿಗಳು ಕನಿಷ್ಟ ೧೦ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಜಿಲ್ಲಾ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.