ಶನಿವಾರಸಂತೆ, ಫೆ. ೮: ಸಮೀಪದ ಹಂಡ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಗುಡುಗಳಲೆ ಜಾತ್ರಾ ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ೭೬ನೇ ವರ್ಷದ ಶ್ರೀಜಯದೇವ ಜಾನುವಾರುಗಳ ಜಾತ್ರಾ ಮಹೋತ್ಸವ ಹಾಗೂ ಶಿವಕುಮಾರ ಮಹಾ ಸ್ವಾಮೀಜಿಯವರ ೨ನೇ ವರ್ಷದ ಪುಣ್ಯರಾಧನಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ಸರಳವಾಗಿ ನೆರವೇರಿತು.

ಬೆಳಿಗ್ಗೆ ಗುಡುಗಳಲೆ ಶ್ರೀ ಬಸವೇಶ್ವರ ದೇವಸ್ಥಾನದಿಂದ ನೆರೆ ಬಸವಣ್ಣ ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿರಿಸಿ ಅಲಂಕೃತ ಜತೆ ರಾಸುಗಳು, ನಂದಿಧ್ವಜ, ಮಂಗಳವಾದ್ಯದೊAದಿಗೆ ಶಿವಕುಮಾರ ಮಹಾ ಸ್ವಾಮೀಜಿಯವರ ಭಾವಚಿತ್ರ ಸಹಿತ ಮೆರವಣಿಗೆ ಮೂಲಕ ಜಾತ್ರಾ ಮೈದಾನಕ್ಕೆ ಕೊಂಡೊಯ್ಯಲಾಯಿತು. ಮನೆಹಳ್ಳಿಮಠ ತಪೋವನದ ಮಹಾಂತ ಶಿವಲಿಂಗ ಸ್ವಾಮೀಜಿ ಸಾಂಕೇತಿಕವಾಗಿ ಉದ್ಘಾಟಿಸಿದರು.

ನಂತರ ಮೈದಾನದಲ್ಲಿರುವ ಶ್ರೀ ಬಸವೇಶ್ವರ ದೇವಾಲಯದಲ್ಲಿ ಉತ್ಸವ ಮೂರ್ತಿಯನ್ನು ಸ್ಥಿರೀಹರಿಸಿ ಸಾಂಪ್ರದಾಯಿಕವಾಗಿ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಕಿರಿಕೊಡ್ಲಿ ಮಠಾಧೀಶ ಸದಾಶಿವಸ್ವಾಮೀಜಿ, ಕಲ್ಲುಮಠಾಧೀಶ ಮಹಾಂತ ಸ್ವಾಮೀಜಿ, ಮನೆಹಳ್ಳಿಮಠ ತಪೋವನದ ಮಹಾಂತಶಿವಲಿAಗ ಸ್ವಾಮೀಜಿ ಹಾಗೂ ಸಿಡಿಗಳಲೆ ಮಠಾಧೀಶ ಇಮ್ಮಡಿ ಶಿವಲಿಂಗ ಸ್ವಾಮೀಜಿಯವರು ಸಾನಿಧ್ಯ ವಹಿಸಿದ್ದು, ಆಶೀರ್ವಚನ ನೀಡಿದರು.

ವೀರಶೈವ ಸಮಾಜ ತಾಲೂಕು ಘಟಕದ ಅಧ್ಯಕ್ಷ ಕೆ.ಬಿ. ಹಾಲಪ್ಪ, ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ಬಿ. ಧರ್ಮಪ್ಪ, ಕಾಳಿಕಾಂಬ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎಲ್. ಲಕ್ಷö್ಮಣಾಚಾರ್, ಬದ್ರಿಯಾ ಜುಮಾ ಮಸೀದಿ ಧರ್ಮಗುರು ಹಸೈನಾರ್ ಫೈಝಿ, ಜಾತ್ರಾ ಸಮಿತಿ ಅಧ್ಯಕ್ಷ ಎಚ್.ಎನ್. ಸಂದೀಪ್, ಉಪಾಧ್ಯಕ್ಷ ಎಂ.ಎಸ್. ಬಸವರಾಜ್, ಕಾರ್ಯದರ್ಶಿ ಎಚ್.ಎಂ. ವಿನಯ್, ಸದಸ್ಯ ಸೋಮಶೇಖರ್ ಉಮಿ, ಇತರ ಸದಸ್ಯರು, ಪೊಲೀಸ್ ಇಲಾಖೆ ಪ್ರದೀಪ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು.

ಶಿವಕುಮಾರ ಮಹಾ ಸ್ವಾಮೀಜಿಯವರ ಪುಣ್ಯಾರಾಧನಾ ಪ್ರಯುಕ್ತ ದಾಸೋಹ ಏರ್ಪಡಿಸ ಲಾಗಿತ್ತು. ನೂರಾರು ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದರು.