ಸೋಮವಾರಪೇಟೆ,ಫೆ.೮: ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಆರೋಪಿಸಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಕೈಬಿಡಬೇಕು. ಇಂಧನ ಬೆಲೆ ಏರಿಕೆಯನ್ನು ತಕ್ಷಣ ಇಳಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟ್ಟಣದ ಕಕ್ಕೆಹೊಳೆ ಜಂಕ್ಷನ್‌ನಿAದ ಪ್ರತಿಭಟನಾ ಮೆರವಣಿಗೆ ನಡೆಸಿ, ತಾಲೂಕು ತಹಶೀಲ್ದಾರ್ ಮೂಲಕ ರಾಜ್ಯಪಾಲರು ಹಾಗೂ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಭಾರತದಲ್ಲಿಯೇ ರೈತಪರ ಹಾಗೂ ಪ್ರಗತಿಪರ ಎಂಬ ಹೆಗ್ಗಳಿಕೆ ಹೊಂದಿರುವ ಕರ್ನಾಟಕ ಭೂಸುಧಾರಣಾ ಕಾಯ್ದೆ-೧೯೬೧ಕ್ಕೆ ರಾಜ್ಯ ಬಿಜೆಪಿ ಸರ್ಕಾರ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತಂದು ಕಾಯ್ದೆಯ ಆತ್ಮವಾಗಿರುವ ಸೆಕ್ಷನ್ ೬೪, ೭೯-ಎ ೨೯ಬಿ, ೭೯ಸಿ ಮತ್ತು ೮೦ನ್ನು ಬಹುತೇಕ ನಿಷ್ಕಿçಯಗೊಳಿಸಿದೆ. ಇದರಿಂದ ಕೆಲವೇ ವರ್ಷಗಳಲ್ಲಿ ಕೃಷಿ ಭೂಮಿ ಬಂಡವಾಳಶಾಹಿ ಹಿಡಿತಕ್ಕೆ ಒಳಪಟ್ಟು ರೈತರು ಭೂಹೀನರಾಗಬೇಕಾದ ಸಂಕಷ್ಟಕ್ಕೆ ತುತ್ತಾಗಬೇಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದರೊಂದಿಗೆ ಕೇಂದ್ರ ಸರ್ಕಾರವೂ ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತಂದು ರೈತರ ಬದುಕನ್ನು ಬೀದಿಗೆ ತಂದಿದೆ. ಐತಿಹಾಸಿಕ ಹೋರಾಟ ನಡೆಸುತ್ತಿರುವ ರೈತರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ. ದಿನಬಳಕೆಯ ಗ್ಯಾಸ್ ಸಬ್ಸಿಡಿಯನ್ನು ತೆಗೆಯಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್, ಡಿಸೇಲ್‌ನ ಲೀಟರ್‌ವೊಂದಕ್ಕೆ ಸರಾಸರಿ ವರ್ಷಗಳಲ್ಲಿ ಕೃಷಿ ಭೂಮಿ ಬಂಡವಾಳಶಾಹಿ ಹಿಡಿತಕ್ಕೆ ಒಳಪಟ್ಟು ರೈತರು ಭೂಹೀನರಾಗಬೇಕಾದ ಸಂಕಷ್ಟಕ್ಕೆ ತುತ್ತಾಗಬೇಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದರೊಂದಿಗೆ ಕೇಂದ್ರ ಸರ್ಕಾರವೂ ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತಂದು ರೈತರ ಬದುಕನ್ನು ಬೀದಿಗೆ ತಂದಿದೆ. ಐತಿಹಾಸಿಕ ಹೋರಾಟ ನಡೆಸುತ್ತಿರುವ ರೈತರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ. ದಿನಬಳಕೆಯ ಗ್ಯಾಸ್ ಸಬ್ಸಿಡಿಯನ್ನು ತೆಗೆಯಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್, ಡಿಸೇಲ್‌ನ ಲೀಟರ್‌ವೊಂದಕ್ಕೆ ಸರಾಸರಿ ಬಿಜೆಪಿಯವರು ಸುಮ್ಮನಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಎಂ. ಲೋಕೇಶ್ ಟೀಕಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಸ್.ಎಂ. ಚಂಗಪ್ಪ, ಸದಸ್ಯ ಕೆ.ಎಂ.ಲೋಕೇಶ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಶೀಲಾ ಡಿಸೋಜ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ವಿ. ಮಿಥುನ್‌ಗೌಡ, ಪ್ರಮುಖರಾದ ಕೆ.ಎ.ಯಾಕುಬ್, ಬಿ.ಈ.ಜಯೇಂದ್ರ, ಬಿ.ಎನ್. ಬಸವರಾಜು, ಬಸಪ್ಪ, ಸುನಿಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.