ಸೋಮವಾರಪೇಟೆ, ಫೆ. ೮: ಬಂಡವಾಳಶಾಹಿಗಳ ಪರವಾಗಿ ಬಿಜೆಪಿ ಸರ್ಕಾರ ಕೆಲಸ ಮಾಡುತ್ತಿದ್ದು, ದೇಶದ ರೈತರು, ಕಾರ್ಮಿಕರು, ಬಡ ಮಂದಿಯ ಶೋಷಣೆ ನಡೆಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಡೀ ದೇಶವನ್ನು ಬಂಡವಾಳಶಾಹಿಗಳಿಗೆ ಮಾರಾಟ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ.ಎ. ಜೀವಿಜಯ ಆರೋಪಿಸಿದರು.

ಪಟ್ಟಣದ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಡೀ ದೇಶ ಬಹುರಾಷ್ಟಿçÃಯ ಕಂಪೆನಿಗಳ ಹಿಡಿತಕ್ಕೆ ಹೋದರೆ, ಮತೊಮ್ಮೆ ಗುಲಾಮಗಿರಿಗೆ ಒಳಗಾಗಬೇಕಿದೆ. ಜಿಎಸ್‌ಟಿ, ನೋಟ್ ಬ್ಯಾನ್, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದರೂ ಬಹುತೇಕರು ಇನ್ನೂ ಮೋದಿ ಧ್ಯಾನದಿಂದ ಹೊರಬಂದಿಲ್ಲ. ದೇಶ ನಾಶವಾಗುವ ಮೊದಲು ಎಲ್ಲರೂ ಎಚ್ಚೆತ್ತುಕೊಳ್ಳಬೇಕು ಎಂದು ಜೀವಿಜಯ ಹೇಳಿದರು.

ಸ್ವಾತಂತ್ರಾö್ಯನAತರ ಕಾಂಗ್ರೆಸ್ ಪಕ್ಷವು ಭಾರತವನ್ನು ಬಲಿಷ್ಠವಾಗಿ ಕಟ್ಟಿದೆ. ರೈಲ್ವೆ, ವಿಮಾನ ನಿಲ್ದಾಣಗಳನ್ನು ಪ್ರಾರಂಭಿಸಿ ಅಂತರಾಷ್ಟಿçÃಯ ಮಟ್ಟದಲ್ಲೂ ಪ್ರಾಮುಖ್ಯತೆ ಗಳಿಸಿದೆ. ಇಂದು ಬಿಜೆಪಿ ಸರ್ಕಾರ ರೈಲ್ವೇ, ವಿಮಾನ ನಿಲ್ದಾಗಳನ್ನೂ ಮಾರಾಟ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನದ ಚರ್ಚೆ ಕೇಳಿ ಮನನೊಂದು ಪಕ್ಷ ಬಿಡಬೇಕಾದ ಅನಿವಾರ್ಯತೆ ಒದಗಿತು. ಜಾತ್ಯಾತೀತ ಶಕ್ತಿಗಳು ಒಂದಾಗಿ ಜನವಿರೋಧಿ ಬಿಜೆಪಿ ಯನ್ನು ಸೋಲಿಸಬೇಕಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಕೆಪಿಸಿಸಿ ವೀಕ್ಷಕ ಹಾಗೂ ಪಿರಿಯಾಪಟ್ಟಣ ಮಾಜಿ ಶಾಸಕ ವೆಂಕಟೇಶ್ ಮಾತನಾಡಿ, ಜೀವಿಜಯ ಅವರು ಕಾಂಗ್ರೆಸ್‌ಗೆ ಬಂದಿರುವುದು ಪಕ್ಷಕ್ಕೆ ಶಕ್ತಿ ಬಂದAತಾಗಿದೆ ಎಂದರು. ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬಂದವರ ಬಗ್ಗೆ ಭೇದಭಾವ ಬೇಡ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಮುಂದಿನ ಚುನಾವಣೆಗಳಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಕಾAಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್‌ಕುಮಾರ್ ಮಾತನಾಡಿ, ಬಿಜೆಪಿ ಯುವಕರಲ್ಲಿ ಭ್ರಮಾಲೋಕ ವನ್ನು ಸೃಷ್ಟಿಸಿದೆ. ಈಗಾಗಲೇ ಭ್ರಮಾಲೋಕದಿಂದ ಯುವ ಸಮುದಾಯ ಹೊರಬರುತ್ತಿದೆ. ಬಿಜೆಪಿಯ ದುರಾಡಳಿತದಿಂದ ದೇಶದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಜೆಪಿಯಿಂದ ದೇಶವನ್ನು ರಕ್ಷಣೆ ಮಾಡಬೇಕಾಗಿದೆ. ಜಾತ್ಯಾತೀತ ಶಕ್ತಿಗಳು ಒಂದಾದರೆ, ದೇಶ-ರಾಜ್ಯದಲ್ಲಿ ಬಿಜೆಪಿ ಧೂಳೀಪಟವಾಗಲಿದೆ ಎಂದರು.

ಐಎನ್‌ಟಿಯುಸಿಯ ರಾಜ್ಯ ಉಪಾಧ್ಯಕ್ಷ ಎನ್.ಎಂ. ಮುತ್ತಪ್ಪ ಮಾತನಾಡಿ, ಪ್ರಜಾಪ್ರಭುತ್ವ ರಾಷ್ಟç ಫ್ಯಾಸಿಸ್ಟ್ ಶಕ್ತಿಗಳಿಗೆ ಸಿಲುಕಿದ್ದು ದುರಂತ. ಕಾರ್ಮಿಕ ಕಾನೂನು ತಿದ್ದುಪಡಿಗಳಿಂದ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರ ಶೋಷಣೆ ಮುಂದುವರಿಯಲಿದೆ. ಇಂತಹ ಕಾಯ್ದೆಗಳ ವಿರುದ್ದ ನಿರಂತರ ಹೋರಾಟ ಅನಿವಾರ್ಯವಾಗಿದೆ ಎಂದರು.

ಇದೇ ಸಂದರ್ಭ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಕೆಲ ಕಾರ್ಯಕರ್ತರು, ಕೆಲ ಗ್ರಾಮ ಪಂಚಾಯಿತಿ ಸದಸ್ಯರು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರಾದ ಬಿ.ಬಿ. ಸತೀಶ್, ಕೆ.ಎಂ. ಲೋಕೇಶ್, ಮಿಥುನ್ ಹಾನಗಲ್, ಎಸ್.ಎಂ. ಚಂಗಪ್ಪ, ಉಸ್ಮಾನ್, ಕೆ.ಎ. ಯಾಕೂಬ್, ಬಿ.ಇ. ಜಯೇಂದ್ರ, ಎಚ್.ಬಿ. ಜಯಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.