ಸಿದ್ದಾಪುರ, ಫೆ. ೯: ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಸಾಬು ವರ್ಗಿಸ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ದಮಯಂತಿ ಆಯ್ಕೆಗೊಂಡಿದ್ದಾರೆ. ನೆಲ್ಯಹುದಿಕೇರಿಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಸಾಬು ವರ್ಗಿಸ್ ೧೫ ಮತಗಳನ್ನು ಪಡೆದುಕೊಂಡು ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ದಮಯಂತಿ ಅವಿರೋಧವಾಗಿ ಆಯ್ಕೆಗೊಂಡರು.