ಮಡಿಕೇರಿ, ಫೆ. ೯: ತಾಳತ್ತಮನೆಯ ಶ್ರೀ ದುರ್ಗಾ ಭಗವತಿ ದೇವಾಲಯದಲ್ಲಿ ದೃಢ ಕಲಶ ಹಾಗೂ ಪ್ರತಿಷ್ಠಾ ವಾರ್ಷಿಕೋತ್ಸವ ಆರಂಭಗೊAಡಿದ್ದು, ತಾ. ೧೨ ರವರೆಗೆ ನಡೆಯಲಿದೆ. ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶ ನದಲ್ಲಿ ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿವೆ.
ತಾ. ೧೦ ರಂದು (ಇಂದು) ಬೆಳಿಗ್ಗೆ ೭ ಗಂಟೆಯಿAದ ಗಣಪತಿ ಹೋಮ, ಧೃಢ ಕಲಶ ಪೂಜೆ, ಗುಳಿಗ ಪ್ರತಿಷ್ಠೆ, ದೃಢ ಕಲಶಾಭಿಷೇಕ, ಮಹಾಬಲಿ ಪೀಠ ಪ್ರತಿಷ್ಠೆ, ಮಹಾಪೂಜೆ, ನಿತ್ಯ ನೈಮಿತ್ಯಾದಿಗಳ ನಿರ್ಣಯ ನಂತರ ಪ್ರಸಾದ ವಿತರಣೆ ನಡೆಯಲಿದೆ.
ಅಪರಾಹ್ನ ೩.೩೦ಕ್ಕೆ ನಡೆಯಲಿ ರುವ ಸಭಾ ಕಾರ್ಯಕ್ರಮವನ್ನು ಕಾಸರಗೋಡಿನ ಶ್ರೀಕ್ಷೇತ್ರ ಕುಂಟಾರು ರವೀಶ್ ತಂತ್ರಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಜಿ.ಪಂ. ಸದಸ್ಯೆ ಯಾಲದಾಳು ಪದ್ಮಾವತಿ, ತಾ.ಪಂ. ಸದಸ್ಯ ಕೊಡಪಾಲು ಗಣಪತಿ, ಮದೆ ಗ್ರಾ.ಪಂ. ಸದಸ್ಯ ಬಿ.ಎಸ್. ನವೀನ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ದೇವಾಲಯದ ಹಿರಿಯ ಅರ್ಚಕರು ಹಾಗೂ ಪ್ರಧಾನ ಸಲಹೆಗಾರ ಬಿ.ಬಿ. ಕೃಷ್ಣಭಟ್ ಅವರಿಗೆ ಗೌರವಾರ್ಪಣೆ ಮಾಡಲಿದ್ದು, ಗಣ್ಯರ ಉಪಸ್ಥಿತಿಯಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುತ್ತದೆ.
ಸಂಜೆ ೫.೩೦ಕ್ಕೆ ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿAದ ಭಜನಾ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಂಜೆ ೬.೩೦ಕ್ಕೆ ’ದೇವಾಲಯ ಮತ್ತು ಪ್ರವಾಸೋದ್ಯಮ’ ಎಂಬ ವಿಷಯದ ಕುರಿತು ಹರಟೆ ಕಾರ್ಯಕ್ರಮ ನಡೆಯಲಿದೆ.
ತಾ. ೧೨ ರಂದು ಬೆಳಿಗ್ಗೆ ೭ ಗಂಟೆಯಿAದ ಗಣಪತಿ ಹೋಮ, ನವಕ, ಮಹಾಪೂಜೆ, ಅನ್ನದಾನ ನಡೆಯಲಿದ್ದು, ಸಂಜೆ ೬ ಗಂಟೆಯಿAದ ರಂಗಪೂಜೆ, ೭ ಗಂಟೆಯಿAದ ದೇವರ ಬಲಿ ಉತ್ಸವ, ಮಹಾದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ.