ಮಡಿಕೇರಿ, ಫೆ. ೯: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ೨೦೨೦ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ ರೂ.೧೫ ಸಾವಿರಗಳ ಪ್ರೋತ್ಸಾಹಧನ ನೀಡ ಲಾಗುವುದು. ಅರ್ಜಿದಾರರು ೧೮ ರಿಂದ ೪೦ ವರ್ಷ ವಯೋಮಿತಿ ಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್‌ಎಸ್‌ಎಲ್‌ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡ ಬೇಕು. ಆಯ್ಕೆಗಾಗಿ ಸಲ್ಲಿಸುವ ಹಸ್ತ ಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ ೧/೮ ಅಳತೆ ಯಲ್ಲಿ ಕನಿಷ್ಟ ೬೦ ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ/ ಸ್ನಾತಕೋತ್ತರ ಪದವಿ (ಪಿಎಚ್‌ಡಿ)ಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬAಧಿಸಿದAತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ ಮತ್ತಿತರ ಸಂಗತಿಗಳಿಗೆ ಸಂಬAಧಿಸಿದAತೆ ಹಾಗೂ ರಾಷ್ಟಿçÃಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯ ಇರಬಾರದು. ಅಲ್ಲದೆ ರಾಷ್ಟಿçÃಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ/ ಸಂಗತಿಗಳು ಪ್ರಸ್ತಾಪವಾಗಿರ ಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆದ್ದರಿಂದ ತಮ್ಮ ಮೂಲ ಹಸ್ತಪ್ರತಿಯ ಒಂದು ಪ್ರತಿಯನ್ನು ತಮ್ಮ ಬಳಿಯೇ ಇಟ್ಟುಕೊಳ್ಳುವುದು. ಅರ್ಜಿಯನ್ನು ತಾ.೨೦ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ೫೬೦ ೦೦೨ ಅವರಿಗೆ ಕಳುಹಿಸಿಕೊಡಲು ಕೋರಿದೆ. ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-೫೬೦೦೦೨ ವೆಬ್‌ಸೈಟ್ ತಿತಿತಿ.ಞಚಿಟಿಟಿಚಿಜಚಿ ಠಿusಣಚಿಞಚಿ ಠಿಡಿಚಿಜhiಞಚಿಡಿಚಿ.ಛಿom, ದೂರವಾಣಿ ಸಂಖ್ಯೆ: ೦೮೦-೨೨೪೮೪೫೧೬/೨೨೧೦೭೭೦೪ ನ್ನು ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಅವರು ತಿಳಿಸಿದ್ದಾರೆ.