ಚೆಟ್ಟಳ್ಳಿ, ಫೆ. ೧೦: ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶ ಘೋಷಣೆಯಾಗಿ, ಒಂದೂವರೆ ತಿಂಗಳು ಕಳೆದಿದೆ. ಮುಂದಿನ ಎರಡೂವರೆ ವರ್ಷಗಳ ಕಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಘೋಷಣೆಯಾಗಿದೆ.
ಚೆಟ್ಟಳ್ಳಿ ಗ್ರಾಮದಲ್ಲಿ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಪಟ್ಟಕ್ಕೆ ಮೀಸಲಾತಿ ಘೋಷಣೆಯಾಗಿದ್ದು, ಇಂದು (ಗುರುವಾರ) ಚುನಾವಣೆ ನಡೆಯಲಿದೆ.
ಒಟ್ಟು ಹದಿನೈದು ಗ್ರಾಮ ಪಂಚಾಯಿತಿ ಸದಸ್ಯರ ಬಲವಿರುವ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಎಸ್.ಸಿ. ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಸಿ.ಎಂ.ಎ. ಮಹಿಳೆ ಮೀಸಲಾತಿ ಘೋಷಣೆಯಾಗಿದೆ.
ಅಧ್ಯಕ್ಷ ಸ್ಥಾನಕ್ಕೆ ಕೂಡ್ಲೂರು ಚೆಟ್ಟಳ್ಳಿ ವಾರ್ಡ್ನಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾಯಿತರಾದ ಹೆಚ್.ಬಿ. ಮುತ್ತಪ್ಪ ಹಾಗೂ ಈರಳವಳಮುಡಿ ವಾರ್ಡ್ನಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ಮಾಲಾಶ್ರೀ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ಉಪಾಧ್ಯಕ್ಷ ಸ್ಥಾನಕ್ಕೆ ಚೆಟ್ಟಳ್ಳಿ ಟೌನ್ ವಾರ್ಡ್ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಪಡೆದ ವಿಮಲಾಕ್ಷಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಬಂಡಾಯಗಾರರು ನಿರ್ಣಾಯಕ: ಒಟ್ಟು ಹದಿನೈದು ಸದಸ್ಯರ ಬಲವಿರುವ ಚೆಟ್ಟಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತರು ೬, ಬಿಜೆಪಿ ಬೆಂಬಲಿತರು ೭ ಹಾಗೂ ಇಬ್ಬರು, ಬಿಜೆಪಿ ಬಂಡಾಯಗಾರರು ಚುನಾಯಿತರಾಗಿದ್ದಾರೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಬಂಡಾಯಗಾರರು ನಿರ್ಣಾಯಕ ರಾಗಿದ್ದಾರೆ. ಬಿಜೆಪಿ ಪಕ್ಷದ ವರಿಷ್ಠರ ಮಾತಿನಂತೆ ಬಿಜೆಪಿ ಬಂಡಾಯ ಗ್ರಾಮ ಪಂಚಾಯಿತಿ ಆಡಳಿತದ ಚುಕ್ಕಾಣಿ ಬಿಜೆಪಿ ಪಾಲಾಗಲಿದೆ. ಕಳೆದ ಅವಧಿಯಲ್ಲಿ ಕಾಂಗ್ರೆಸ್ ಬೆಂಬಲಿತರು ಗ್ರಾಮ ಪಂಚಾಯಿತಿ ಆಡಳಿತದ ಚುಕ್ಕಾಣಿ ಹಿಡಿದಿದ್ದರು.
ಕಾಂಗ್ರೆಸ್ ಹಾಗೂ ಬಿಜೆಪಿ ಬಂಡಾಯಗಾರರು ಒಳ ಒಪ್ಪಂದ
ಮೂಲಗಳ ಪ್ರಕಾರ ಇಬ್ಬರು ಬಂಡಾಯ ಬಿಜೆಪಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಗೆಲುವು ಪಡೆದ ಸದಸ್ಯರಿಬ್ಬರು ಹಾಗೂ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಬಂಡಾಯಗಾರರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮುತ್ತಪ್ಪನಿಗೆ ಮತ ನೀಡಿ, ಉಪಾಧ್ಯಕ್ಷ ಸ್ಥಾನವನ್ನು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಗೆಲುವು ಪಡೆದಿದ್ದ ವಿಮಲಾಕ್ಷಿಯವರು ಪಡೆದುಕೊಳ್ಳುವ ಸಾಧ್ಯತೆಗಳಿವೆ.
ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ಸಾಧ್ಯತೆ
ಬಿಜೆಪಿ ಬಂಡಾಯ ನಾಲ್ವರು ಸದಸ್ಯರು ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮತ ನೀಡುವುದು ಬಹುತೇಕ ಖಚಿತವಾಗಿದೆ.
ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಮೂವರು ಬಿ.ಸಿ.ಎಂ.ಎ. ಮಹಿಳಾ ಅಭ್ಯರ್ಥಿಗಳು ಇದ್ದರೂ ಸಹಾ ಕಣಕ್ಕಿಳಿಸದೆ, ಕಾಂಗ್ರೆಸ್, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ ವಿಮಲಾಕ್ಷಿಯವರಿಗೆ ಬೆಂಬಲ ನೀಡುತ್ತೇವೆ ಎಂಬ ಒಪ್ಪಂದ ಮಾಡಲಾಗಿದೆ. ಈ ಲೆಕ್ಕಾಚಾರದಂತೆ ಚುನಾವಣೆ ನಡೆದರೆ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆಯಲಿದೆ.
ಪಡೆದ ಸದಸ್ಯರಿಬ್ಬರು ಹಾಗೂ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.