ಮಡಿಕೇರಿ, ಫೆ. ೧೦: ತಾ.೧೩ ರಂದು ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ದಲಿತ (ಅಹಿಂದ) ಒಕ್ಕೂಟದ ಸಭೆ ನಗರದ ವಾಣಿಜ್ಯೋದ್ಯಮಿ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಒಕ್ಕೂಟ ತಿಳಿಸಿದೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆ ಸ್ಥಾಪಕಧ್ಯಕ್ಷ ಟಿ.ಪಿ ರಮೇಶ್, ನೊಂದವರ, ಹಿಂದುಳಿದವರ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಸಂಘಟನೆ ಕಾರ್ಯ ಚಟುವಟಿಕೆ ಪುನರಾರಂಭಿಸುತ್ತಿದೆ ಹೋಬಳಿ ಮಟ್ಟದಲ್ಲಿ ಸಂಘಟನೆ ರಚನೆ ಮಾಡಲು ಉದ್ದೇಶಿಸಲಾಗಿದೆ. ಇದರ ಪ್ರಾಥಮಿಕ ಹಂತವಾಗಿ ಸಂಘಟನೆ ರೂಪುರೇಷೆಯ ಬಗ್ಗೆ ತಾ.೧೩ ರಂದು ಸಭೆ ನಡೆಸಿ ಮಡಿಕೇರಿ, ಫೆ. ೧೦: ತಾ.೧೩ ರಂದು ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ದಲಿತ (ಅಹಿಂದ) ಒಕ್ಕೂಟದ ಸಭೆ ನಗರದ ವಾಣಿಜ್ಯೋದ್ಯಮಿ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಒಕ್ಕೂಟ ತಿಳಿಸಿದೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆ ಸ್ಥಾಪಕಧ್ಯಕ್ಷ ಟಿ.ಪಿ ರಮೇಶ್, ನೊಂದವರ, ಹಿಂದುಳಿದವರ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಸಂಘಟನೆ ಕಾರ್ಯ ಚಟುವಟಿಕೆ ಪುನರಾರಂಭಿಸುತ್ತಿದೆ ಹೋಬಳಿ ಮಟ್ಟದಲ್ಲಿ ಸಂಘಟನೆ ರಚನೆ ಮಾಡಲು ಉದ್ದೇಶಿಸಲಾಗಿದೆ. ಇದರ ಪ್ರಾಥಮಿಕ ಹಂತವಾಗಿ ಸಂಘಟನೆ ರೂಪುರೇಷೆಯ ಬಗ್ಗೆ ತಾ.೧೩ ರಂದು ಸಭೆ ನಡೆಸಿ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಕಾರ್ಯಾಧ್ಯಕ್ಷ ಬೇಬಿ ಮ್ಯಾಥ್ಯು ಮಾತನಾಡಿ, ಸಭೆಯಲ್ಲಿ ಕೊಡಗು ಜಿಲ್ಲೆಯ ಮೂಲಭೂತ ಸಮಸ್ಯೆ, ಬೆಳೆಗಾರರ ಸಂಕಷ್ಟ, ನಿವೇಶನ ರಹಿತರಿಗೆ ನಿವೇಶನ, ಅತಿವೃಷ್ಟಿಯಿಂದ ಸಮಸ್ಯೆಗೆ ಸಿಲುಕಿದವರಿಗೆ ತ್ವರಿತ ಪರಿಹಾರ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಚರ್ಚಿಸಿ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಮುದ್ದಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್, ಕಾರ್ಯದರ್ಶಿ ಚಂದ್ರು ಇದ್ದರು.