ನಾಪೋಕ್ಲು, ಫೆ. ೧೦: ನಾಪೋಕ್ಲು ಕೊಡವ ಸಮಾಜದಲ್ಲಿ ತಾ. ೧೫ ರಂದು ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಲಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ನ್ಯಾಷನಲ್ ಓರಲ್ ಹೆಲ್ತ್ ಪಾಲಿಸಿ, ದಂತ ಭಾಗ್ಯ ಯೋಜನೆ, ಕೊಡಗು ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಸಮುದಾಯ ಆರೋಗ್ಯ ಕೇಂದ್ರ ನಾಪೋಕ್ಲು ಹಾಗೂ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ನಡೆಯುವ ಶಿಬಿರದಲ್ಲಿ ಉಚಿತ ದಂತ ತಪಾಸÀಣೆ, ಚಿಕಿತ್ಸೆ ಹಾಗೂ ದಂತ ಭಾಗ್ಯ ಯೋಜನೆ ಫಲಾನುಭವಿಗಳ ತಪಾಸಣೆ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.