ಮಡಿಕೇರಿ, ಫೆ. ೧೦: ತಾ.೧೩ ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಸಮಸ್ತ ಸರ್ಕಾರಿ ನೌಕರರ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟನೆ ತಿಳಿಸಿದೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಎಂ ಮಂಜುನಾಥ್, ತಾ.೧೩ ರಂದು ಮೊದಲ ಬಾರಿಗೆ ರಾಜ್ಯ ಸರ್ಕಾರಿ ನೌಕರರ ಸಮ್ಮಿಲನ ಕಾರ್ಯಕ್ರಮ ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಮತ್ತು ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿAಗೇಗೌಡ ಸೇರಿದಂತೆ ರಾಜ್ಯ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಜ್ಯೋತಿ ಸಂಜೀವಿನಿ ಯೋಜನೆ ಮತ್ತು ವೈದ್ಯಕೀಯ ಬಿಲ್ಲಿನ ಮರುಪಡೆಯುವಿಕೆ, ನೌಕರರ ಬಡ್ತಿಗೆ ಸಂಬAಧಿಸಿದ ವಿಚಾರ, ಸಿ ಮತ್ತು ಆರ್ ತಿದ್ದುಪಡಿ, ನೌಕರರ ಆರ್ಥಿಕ ಸೌಲಭ್ಯ, ತಾಂತ್ರಿಕ ತೊಂದರೆಯಿAದ ಸರ್ಕಾರದ ಅದಿಸೂಚನೆ ಹೊರಡಿಸಿದ್ದರು ವರ್ಗಾವಣೆ ಪ್ರಕ್ರಿಯೆ ನಡೆಯದ ಬಗ್ಗೆ ಹಾಗೂ ಹೊಸ ಪಿಂಚಣಿ ಯೋಜನೆ (ಎಸ್.ಪಿ.ಎಸ್) ರದ್ದತಿ ವಿಚಾರದ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಂಡು ಮುಂದಿನ ಹೋರಾಟದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ವೀರಾಜಪೇಟೆ ತಾಲೂಕು ಅಧ್ಯಕ್ಷ ಸುರೇಂದ್ರ ಮಾತನಾಡಿ, ಸಮ್ಮಿಲನ ಕಾರ್ಯಕ್ರಮಕ್ಕೆ ಸಂಘಟನೆ ಪೂರಕ ಬೆಂಬಲ ನೀಡುತ್ತಿದೆ. ರಾಜ್ಯದ ವಿವಿಧೆಡೆಗಳಿಂದ ನೌಕರರು ಭಾಗವಹಿಸಲಿದ್ದಾರೆ. ಸೌಹಾರ್ಧ ಯುತವಾಗಿ ಸಮಸ್ಯೆ ಪರಿಹಾರಕ್ಕೆ ಕಾರ್ಯಕ್ರಮ ಸಹಕಾರಿಯಾಗಿದೆ. ಸಭೆಯಲ್ಲಿ ಶಿಕ್ಷಕರ ಸಂಘಕ್ಕೆ ಚುನಾಯಿತರಾದವರನ್ನು ಸನ್ಮಾನಿಸಲಾ ಗುತ್ತದೆ. ಏ.೨೧ ರಂದು ಸರ್ಕಾರಿ ನೌಕರರ ದಿನ ಆಚರಿಸಲಾಗುತ್ತದೆ ಎಂದು ತಿಳಿಸಿದರು.

ಗೋಷ್ಟಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಬಿ ರವಿ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಅರುಣ್ ಕುಮಾರ್, ಸೋಮವಾರಪೇಟೆ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಬಸÀವರಾಜು, ಉಪಾಧ್ಯಕ್ಷೆ ರೇಖಾ ಕುಮಾರಿ ಇದ್ದರು.