ಸೋಮವಾರಪೇಟೆ, ಫೆ. ೧೧: ಸಮೀಪದ ತೋಳೂರು ಶೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ರುದ್ರಪ್ಪ (ಶೇಖರ್) ಹಾಗೂ ಉಪಾಧ್ಯಕ್ಷರಾಗಿ ಭವಾನಿ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ತೋಟಗಾರಿಕಾ ಇಲಾಖಾಧಿಕಾರಿ ಶೋಭಾ ಅವರು ಚುನಾವಣಾಧಿಕಾರಿಯಾಗಿ, ಪಿಡಿಓ ಮಂಜುಳ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದರು.

ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ತೋಟಗಾರಿಕಾ ಇಲಾಖಾಧಿಕಾರಿ ಶೋಭಾ ಅವರು ಚುನಾವಣಾಧಿಕಾರಿಯಾಗಿ, ಪಿಡಿಓ ಮಂಜುಳ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದರು.