ವೀರಾಜಪೇಟೆ, ಫೆ. ೧೧: ಕಲ್ಲುಬಾಣೆ ಯೂತ್ ಅಸೋಸಿ ಯೇಷನ್ ವತಿಯಿಂದ ೭ನೇ ವರ್ಷದ ಕೆಪಿಎಲ್ ಸೌಹಾರ್ದ ಕ್ರೀಡಾಕೂಟ ತಾ. ೧೨, ೧೩ ಮತ್ತು ೧೪ ರಂದು ಕಲ್ಲುಬಾಣೆಯ ಚಂದಪAಡ ಕಿರಣ್ ಅವರ ಬಾಣೆಯಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ತಾ. ೧೨ ರಂದು (ಇಂದು) ಫುಟ್‌ಬಾಲ್ ಮತ್ತು ಕ್ರಿಕೆಟ್ ಪಂದ್ಯಾವಳಿಗಳು ನಡೆಯಲಿದ್ದು, ಅಪರಾಹ್ನ ೨ ಗಂಟೆಗೆ ಅತಿಥಿ ಗಣ್ಯರು ಕಾರ್ಯಕ್ರಮ ಉದ್ಘಾಟಿಸಲಿದ್ದು, ತಾ. ೧೪ ರಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ. ಈ ಬಾರಿ ೬-೧೦ ವರ್ಷದೊಳಗಿನ ಮಕ್ಕಳಿಗೆ ಓಟದ ಸ್ಪರ್ಧೆ, ೧೦ ರಿಂದ ೧೫ ವರ್ಷದೊಳಗಿನ ಮಕ್ಕಳಿಗೆ ಕಾಲ್ಚೆಂಡು ಪಂದ್ಯಾಟ ಏರ್ಪಡಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸ್ಥಳೀಯ ಸಾಧಕರಿಗೆ ಸನ್ಮಾನ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದವರಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಕಳೆದ ಬಾರಿ ೧೦ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗು ವುದು ಎಂದು ತಿಳಿಸಿದರು.