ಚೆಟ್ಟಳ್ಳಿ, ಫೆ. ೧೧: ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಮುತ್ತಪ್ಪ ಹೆಚ್.ಬಿ. ಹಾಗೂ ಉಪಾಧ್ಯಕ್ಷೆಯಾಗಿ ಬಿಜೆಪಿ ಬಂಡಾಯ ಅಭ್ಯರ್ಥಿ ವಿಮಲಾಕ್ಷಿ ಬಿ.ಆರ್. ಅವಿರೋಧ ಆಯ್ಕೆಗೊಂಡರು.
ಅಧ್ಯಕ್ಷ ಸ್ಥಾನಕ್ಕೆ ಎಸ್‌ಸಿ ಹಾಗೂ ಬಿಸಿಎಂಎ ಮಹಿಳಾ ಸ್ಥಾನ ಘೋಷಣೆಯಾಗಿತ್ತು. ಬಿಜೆಪಿ ಬೆಂಬಲಿತ ಪಕ್ಷದಲ್ಲಿ ಈರಳೆವಳಮುಡಿ ವಾರ್ಡಿನಿಂದ ಗೆಲುವು ಸಾಧಿಸಿದ ಮಾಲಾಶ್ರೀ ಹಾಗೂ ಕೂಡ್ಲೂರು ಚೆಟ್ಟಳ್ಳಿ ವಾರ್ಡ್ನ ಮುತ್ತಪ್ಪ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಮುತ್ತಪ ಅವರಿಗೆ ೮ ಮತ, ಮಾಲಾಶ್ರೀಗೆ ೭ ಮತ ದೊರೆತ ಹಿನ್ನೆಲೆ ಮುತ್ತಪ್ಪ ಅಧ್ಯಕ್ಷರಾಗಿ ಅಯ್ಕೆಗೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆ ಬಿಜೆಪಿ ಬಂಡಾಯ ಅಭ್ಯರ್ಥಿ ವಿಮಲಾಕ್ಷಿ ಅವಿರೋಧ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್ ಕಾರ್ಯನಿರ್ವಹಿಸಿದರು. ನೂತನವಾಗಿ ಆಯ್ಕೆಗೊಂಡ ಸದಸ್ಯರು, ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನಂದೀಶ್, ಜಿ.ಪಂ. ಸದಸ್ಯೆ ಸುನೀತಾ ಮಂಜುನಾಥ್ ಹಾಜರಿದ್ದರು.