ಸೋಮವಾರಪೇಟೆ, ಫೆ. ೧೧: ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಧನಲಕ್ಷಿö್ಮÃ ಪಾಂಡಿಯನ್ ಹಾಗೂ ಉಪಾಧ್ಯಕ್ಷರಾಗಿ ಹೆಚ್.ವಿ. ಮಿಥುನ್ ಗೌಡ ಆಯ್ಕೆಯಾಗಿದ್ದಾರೆ.

ಪಂಚಾಯಿತಿಯ ಅಧ್ಯಕ್ಷ ಸ್ಥಾನ ಬಿಸಿಎಂಬಿ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಅಧ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆದರೆ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಮಿಥುನ್ ಆಯ್ಕೆಯಾದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಅವರು ಚುನಾವಣಾಧಿಕಾರಿಯಾಗಿ, ಪಿಡಿಓ ಅಸ್ಮಾ ಅವರು ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದರು. ಈ ಸಂದರ್ಭ ಗ್ರಾ.ಪಂ. ಚುನಾಯಿತ ಜನಪ್ರತಿನಿಧಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಮಾಜಿ ಅಧ್ಯಕ್ಷ ಕೆ.ಎಂ. ಲೋಕೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.