ಶ್ರೀಮಂಗಲ, ಫೆ. ೧೨: ಗ್ರಾಮೀಣ ಭಾಗದ ಜನರ ಬಾಯಿ ಮತ್ತು ದಂತದ ಆರೋಗ್ಯ ರಕ್ಷಣೆ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ಉಚಿತ ದಂತ ಚಿಕಿತ್ಸಾ ಕಾರ್ಯಕ್ರಮವನ್ನು ಸರಕಾರ ಹಮ್ಮಿಕೊಂಡಿದೆ. ಇದರ ಪ್ರಯೋಜನವನ್ನು ಗ್ರಾಮೀಣ ಭಾಗದ ಜನರು ಪಡೆದುಕೊಳ್ಳುವಂತೆ ವೀರಾಜಪೇಟೆ ಕೊಡಗು ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಉಪ ಪ್ರಾಂಶುಪಾಲ ಡಾ. ಜಿತೇಶ್ ಜೈನ್ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟಿçÃಯ ಓರಲ್ ಹೆಲ್ತ್ ಪಾಲಿಸಿ ಹಾಗೂ ದಂತ ಭಾಗ್ಯ ಯೋಜನೆ ತಾಲೂಕು ಆರೋಗ್ಯ ಇಲಾಖೆ ಗೋಣಿಕೊಪ್ಪ, ಕುಟ್ಟ ಸಮುದಾಯ ಆರೋಗ್ಯ ಕೇಂದ್ರ ಮತ್ತು ವೀರಾಜಪೇಟೆಯ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ಆಶ್ರಯದಲ್ಲಿ ಶ್ರೀಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಶ್ರೀಮಂಗಲ, ಫೆ. ೧೨: ಗ್ರಾಮೀಣ ಭಾಗದ ಜನರ ಬಾಯಿ ಮತ್ತು ದಂತದ ಆರೋಗ್ಯ ರಕ್ಷಣೆ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ಉಚಿತ ದಂತ ಚಿಕಿತ್ಸಾ ಕಾರ್ಯಕ್ರಮವನ್ನು ಸರಕಾರ ಹಮ್ಮಿಕೊಂಡಿದೆ. ಇದರ ಪ್ರಯೋಜನವನ್ನು ಗ್ರಾಮೀಣ ಭಾಗದ ಜನರು ಪಡೆದುಕೊಳ್ಳುವಂತೆ ವೀರಾಜಪೇಟೆ ಕೊಡಗು ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಉಪ ಪ್ರಾಂಶುಪಾಲ ಡಾ. ಜಿತೇಶ್ ಜೈನ್ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟಿçÃಯ ಓರಲ್ ಹೆಲ್ತ್ ಪಾಲಿಸಿ ಹಾಗೂ ದಂತ ಭಾಗ್ಯ ಯೋಜನೆ ತಾಲೂಕು ಆರೋಗ್ಯ ಇಲಾಖೆ ಗೋಣಿಕೊಪ್ಪ, ಕುಟ್ಟ ಸಮುದಾಯ ಆರೋಗ್ಯ ಕೇಂದ್ರ ಮತ್ತು ವೀರಾಜಪೇಟೆಯ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ಆಶ್ರಯದಲ್ಲಿ ಶ್ರೀಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಕಳೆದರೂ, ಕೊಡಗು ದಂತ ಮಹಾವಿದ್ಯಾಲಯಕ್ಕೆ ಇದುವರೆಗೆ ೬೦ ರಿಂದ ೭೦ ಜನ ಮಾತ್ರ ಚಿಕಿತ್ಸೆಗೆ ಬಂದಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಲ್ಲಿ ಕೊಡಗು ಜಿಲ್ಲೆಯ ಜನರು ಹಿಂದೆ ಉಳಿದಿದ್ದಾರೆ ಎಂದು ಹೇಳಿದರು.

ಗ್ರಾಮೀಣ ಭಾಗದ ಜನರಿಗೆ ಹಲ್ಲು ಮತ್ತು ಬಾಯಿಯ ಆರೋಗ್ಯಕ್ಕೆ ಸಂಬAಧಪಟ್ಟAತೆ ನಡೆಯುವ ಶಿಬಿರಗಳಿಗೆ ನಮ್ಮ ದಂತ ಮಹಾವಿದ್ಯಾಲಯದಿಂದ ಸದಾ ಸಹಕಾರವಿದೆ ಎಂದು ಘೋಷಿಸಿದರು.

ಕಾರ್ಯಕ್ರಮವನ್ನು ಮಣಿಪಾಲ್ ಆಸ್ಪತ್ರೆ ಮತ್ತು ಮೈಸೂರು ಜೆಎಸ್‌ಎಸ್ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಜಿಲ್ಲೆಯ ಹಿರಿಯ ದಂತ ವೈದ್ಯ ಡಾ. ಕೋಳೆರ ಕಾರ್ಯಪ್ಪ ಅವರು ಉದ್ಘಾಟಿಸಿ ದರು. ಶ್ರೀಮಂಗಲ ತಾ.ಪಂ. ಸದಸ್ಯೆ ಪಿ.ಟಿ. ಸರೋಜ, ಶ್ರೀಮಂಗಲ ವಲಯ ಅರಣ್ಯಾಧಿಕಾರಿ ವೀರೇಂದ್ರ ಮರಿಬಸಣ್ಣವರ್ ಇದ್ದರು. ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ಡಾ. ಯಶ್ವಿನ್, ಕುಟ್ಟ ಸಮುದಾಯ ಆರೋಗ್ಯ ಕೇಂದ್ರದ ಡಾ. ಶ್ರೀದೇವಿ, ಶ್ರೀಮಂಗಲ ಆರೋಗ್ಯ ಕೇಂದ್ರದ ಡಾ. ಶರಣಪ್ಪ ಅವರೊಂದಿಗೆ ಶಿಬಿರದಲ್ಲಿ ಕೊಡಗು ದಂತ ಮಹಾ ವಿದ್ಯಾಲಯದ ವೈದ್ಯರುಗಳು ಮತ್ತು ಸಿಬ್ಬಂದಿಗಳು ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡಿದರು.

ಶ್ರೀಮಂಗಲ ಆರೋಗ್ಯ ಕೇಂದ್ರದ ಆರೋಗ್ಯ ಪರಿವೀಕ್ಷಕ ಕೆಂಪರಾಜಗೌಡ ಸ್ವಾಗತಿಸಿ, ಆರೋಗ್ಯ ಕೇಂದ್ರದ ಎಓ ಶ್ರೀಕಾಂತ್ ವಂದಿಸಿದರು.