ಸೋಮವಾರಪೇಟೆ, ಫೆ.೧೨: ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ ಗ್ರಾಮದ ರಾಜ್ಯಹೆದ್ದಾರಿ ಬದಿಯಲ್ಲಿ ಕೋಳಿ ಮಾಂಸದAಗಡಿಯ ತ್ಯಾಜ್ಯವನ್ನು ಹಾಕುತ್ತಿರುವ ಹಿನ್ನೆಲೆಯಲ್ಲಿ ವಾತಾವರಣ ಗಬ್ಬೆದ್ದು ನಾರುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕೋಳಿ ಅಂಗಡಿಗಳ ಮಾಲೀಕರು ತ್ಯಾಜ್ಯವನ್ನು ಸೂಕ್ತ ಸ್ಥಳಗಳಲ್ಲಿ ವಿಲೇವಾರಿ ಮಾಡಬೇಕು. ರಸ್ತೆ ಬದಿಯಲ್ಲಿ ಎಸೆಯುತ್ತಿರುವವರ ವಿರುದ್ಧ ಪಂಚಾಯಿತಿ ಸೂಕ್ತ ಕ್ರಮಕೈಗೊಳ್ಳಬೇಕು. ಕೂಡಲೆ ತ್ಯಾಜ್ಯವನ್ನು ತೆಗೆದು ಸ್ವಚ್ಛ ಮಾಡಬೇಕೆಂದು ಕರ್ನಾಟಕ ರಕ್ಷಣಾವೇದಿಕೆಯ ತಾಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜಾ ಒತ್ತಾಯಿಸಿದ್ದಾರೆ.