ಮಡಿಕೇರಿ, ಫೆ. ೧೩: ಮೈಸೂರಿನ ಕೊಡವ ದೀನಬಂಧು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೂರ್ನಾಡು ವಿದ್ಯಾಸಂಸ್ಥೆಯ ೧೭ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ದೀನಬಂಧು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕಟ್ಟೆರ ಎ. ಕಾರ್ಯಪ್ಪ, ಕಾರ್ಯದರ್ಶಿ ಪಟ್ಟಡ ಎ. ಜಯಕುಮಾರ್ ಖಜಾಂಚಿ ಚಾರಿಮಂಡ ಜಿ. ಮಾದಪ್ಪ, ಸದಸ್ಯ ಚಂಬAಡ ಸೋಮಣ್ಣ ಮೈಸೂರಿನಿಂದ ಆಗಮಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಿದರು.

ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ ಹಾಗೂ ಆಡಳಿತ ಮಂಡಳಿ ಸದಸ್ಯರು ಹಾಗೂ ವಿದ್ಯಾಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಇದ್ದರು.