ಕುಶಾಲನಗರ, ಫೆ. ೧೫: ಹೆಬ್ಬಾಲೆ ಅಂಬೇಡ್ಕರ್ ಅಭಿವೃದ್ಧಿ ವೇದಿಕೆ ಹಾಗೂ ಗ್ರಾಮಸ್ಥರ ವತಿಯಿಂದ ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿ ಗಳು ಹಾಗೂ ಹೆಬ್ಬಾಲೆ ನಿವಾಸಿ ಐಎಎಸ್ ಅಧಿಕಾರಿ ಕೆ.ನಾಗೇಂದ್ರ ಪ್ರಸಾದ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕುಶಾಲನಗರ ಎಪಿಸಿಎಂಎಸ್ ಸುವರ್ಣ ಮಹೋತ್ಸವ ಸಭಾಂಗಣ ದಲ್ಲಿ ಅಭಿನಂದನಾ ಸಮಾರಂಭ ನಡೆಯಿತು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದ ಮೈಸೂರಿನ ಉರಿಲಿಂಗ ಪೆದ್ದಿ ಮಹಾಸಂಸ್ಥಾನ ಪೀಠಾಧ್ಯಕ್ಷ ಶ್ರೀ ಜ್ಞಾನ ಪ್ರಕಾಶ್ ಸ್ವಾಮೀಜಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದಲ್ಲಿನ ಆರ್ಥಿಕ ಬಡತನ ನಿರ್ಮೂಲನೆಗಾಗಿ ಮೀಸಲಾತಿಯನ್ನು ಜಾರಿಗೆ ತಂದಿದ್ದಾರೆ. ಈ ಮೀಸಲಾತಿ ಸೌಲಭ್ಯ ಪಡೆದು ಅನೇಕ ಹಿಂದುಳಿದ ಸಮುದಾಯಗಳು ಏಳಿಗೆ ಕಾಣುತ್ತಿವೆ. ಆದರೆ ಈ ಮೀಸಲಾತಿ ವಿರುದ್ಧ ಮಾತನಾಡುತ್ತಿದ್ದ ಸಮುದಾಯಗಳು ಈಗ ತಮ್ಮ ಜಾತಿಯ ಸ್ವಾಮೀಜಿಗಳ ನೇತೃತ್ವದಲ್ಲಿ ಮೀಸಲಾತಿ ಸೌಲಭ್ಯ ಕೋರಿ ಪಾದಯಾತ್ರೆ ನಡೆಸುತ್ತಿರುವುದು ದುರಂತ ಎಂದರು
ನಿವೃತ್ತ ಪ್ರಾಂಶುಪಾಲ ಎಚ್.ಕೆ. ಪುಟ್ಟರಾಜು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಹೆಬ್ಬಾಲೆ ಕೆ.ನಾಗೇಶ್, ಬೆಂಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಎಚ್.ಡಿ.ಲಿಂಗರಾಜು, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಿ.ಜಯವರ್ಧನ್, ನಿವೃತ್ತ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಿದ್ದಪ್ಪ, ಕಾರ್ಯಕ್ರಮ ಸಂಯೋಜಕ ಎಚ್.ಆರ್.ವಿಜಯ್, ಎಪಿಸಿಎಂಎಸ್ ನಿರ್ದೇಶಕ ಎಚ್.ಡಿ.ದೊಡ್ಡಯ್ಯ, ಗ್ರಾ.ಪಂ.ಮಾಜಿ ಅಧ್ಯಕ್ಷ ದೇವಯ್ಯ, ಅಬಕಾರಿ ಉಪ ನಿರೀಕ್ಷಕ ಎಚ್.ಆರ್.ನಾಗೇಶ್, ಕೆಪಿಟಿಸಿಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಚ್.ಆರ್.ಮುರಳಿ, ವಕೀಲ ಎಚ್.ಎಂ.ರವೀAದ್ರ, ಶಿಕ್ಷಕ ಎಚ್.ಕೆ.ಅಶೋಕ್ ಉಪಸ್ಥಿತರಿದ್ದರು.