ಕೂಡಿಗೆ, ಫೆ. ೧೫: ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನಾ ಸಮಾರಂಭವು ತಾ. ೧೬ರಂದು (ಇಂದು) ನಡೆಯಲಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್. ಕೃಷ್ಣೆಗೌಡ ತಿಳಿಸಿದ್ದಾರೆ.

ಕಾರ್ಯಕ್ರಮ ಸಾನ್ನಿಧ್ಯವನ್ನು ತೊರೆನೂರು ವಿರಕ್ತ ಮಠದ ಮಲ್ಲೇಶ ಸ್ವಾಮಿಗಳು ವಹಿಸಲಿದ್ದಾರೆ. ಕಟ್ಟಡದ ಉದ್ಘಾಟನೆಯನ್ನು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ನೆರವೇರಿಸುವರು. ಕಟ್ಟಡ ವಂತಿಗೆ ದಾನಿಗಳ ನಾಮಫಲಕವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅನಾವರಣಗೊಳಿಸುವರು. ಹಿರಿಯ ಸಹಕಾರಿಗಳನ್ನು ಕ್ಷೇತ್ರದ ಶಾಸಕ. ಎಂ.ಪಿ. ಅಪ್ಪಚ್ಚು ರಂಜನ್ ಸನ್ಮಾನಿಸುವರು. ಸಭಾಂಗಣದ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ನೆರವೇರಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್. ಕೃಷ್ಣೆಗೌಡ ವಹಿಸಲಿದ್ದು, ನಗದು ಕೌಂಟರ್ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯೆ ವೀಣಾಅಚ್ಚಯ್ಯ ಮತ್ತು ಸಹಕಾರ ಸಂಘಗಳ ಸಾಲ ವಿತರಣೆಯನ್ನು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ. ಗಣಪತಿ ನೆರವೇರಿಸುವರು ಎಂದು ಕೃಷ್ಣೇಗೌಡ ತಿಳಿಸಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಕೇಂದ್ರ ಬ್ಯಾಂಕ್‌ನ ಉಪಾಧ್ಯಕ್ಷ ಎಸ್. ಹರೀಶ್ ಪೂವಯ್ಯ, ಸಹಕಾರ ಸಂಘದ ಉಪಾಧ್ಯಕ್ಷ ಡಿ.ಆರ್. ಪ್ರೇಮ ಕುಮಾರ್, ಜಿಲ್ಲಾ ಕೇಂದ್ರ ಬ್ಯಾಂಕ್‌ನ ನಿರ್ದೇಶಕ ಬಿ.P.ೆ ಚಿಣ್ಣಪ್ಪ, ಬಿ.ಡಿ. ಮಂಜುನಾಥ್. ಎಸ್.ಬಿ. ಭರತ್ ಕುಮಾರ್, ಉಷಾ ತೇಜಸ್ವಿನಿ, ಜಿಲ್ಲಾ ಪಂಚಾಯತ್ ಸದಸ್ಯ ಹೆಚ್.ಆರ್. ಶ್ರೀನಿವಾಸ, ಸಹಕಾರ ಸಂಘಗಳ ನಿಬಂಧಕ ಸಲೀಂ, ಸಹಾಯಕ ನಿಬಂಧಕ ರವಿಕುಮಾರ್, ಸಹಕಾರ ಅಭಿವೃದ್ಧಿ ಅಧಿಕಾರಿ ಎಂ.ಈ. ಮೋಹನ್, ತಾಲೂಕು ಪಂಚಾಯತ್ ಸದಸ್ಯ ಜಯಣ್ಣ ಸೇರಿದಂತೆ ಹೋಬಳಿ ವ್ಯಾಪ್ತಿಯ ಎಲ್ಲಾ ಸಹಕಾರ ಸಂಘಗಳ ಅಧ್ಯಕ್ಷರು, ತೊರೆನೂರು ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಭಾಗವಹಿಸಲಿದ್ದಾರೆ ಇದೇ ಸಂದರ್ಭದಲ್ಲಿ ಸಹಕಾರ ರಂಗದಲ್ಲಿ ಸೇವೆ ಸಲ್ಲಿಸಿದವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.