ಮಡಿಕೇರಿ, ಫೆ. ೧೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಡಗು ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ತಾ ೧೯ರಿಂದ ೨೦ರವರೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಬಿ. ರವಿ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ಉಸ್ತುವಾರಿ ಸಚಿವ ವಿ. ಸೋಮಣ್ಣ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದು, ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ದ್ವಜಾರೋಹಣ ನೆರವೇರಿಸಲಿದ್ದು, ಸಂಸದ ಪ್ರತಾಪ್ ಸಿಂಹ ವಂದನೆ ಸ್ವೀಕರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಂಘದ ಕ್ರೀಡಾ ಕಾರ್ಯದರ್ಶಿ ಪೊನ್ನಚ್ಚನ ಶ್ರೀನಿವಾಸ್ ಮಾತನಾಡಿ, ತಾ ೧೯ರಂದು ಅಥ್ಲೆಟಿಕ್, ವಾಲಿಬಾಲ್, ಕಬ್ಬಡ್ಡಿ, ಬಾಲ್ ಬ್ಯಾಡ್‌ಮಿಂಟನ್, ಥ್ರೋಬಾಲ್ ಪಂದ್ಯಾಟ ನಡೆಯಲಿದೆ. ತಾ.೨೦ರಂದು ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದ್ದು, ಟೇಬಲ್ ಟೆನ್ನಿಸ್, ಕೇರಂ, ಚೆಸ್, ಫುಟ್‌ಬಾಲ್, ಹಾಕಿ, ಬಾಸ್ಕೆಟ್ ಬಾಲ್, ಕ್ರಿಕೆಟ್, ಸ್ವಿಮ್ಮಿಂಗ್ ಸ್ಪರ್ಧೆಗಳು ನಡೆಯಲಿದೆ. ತಾ.೨೧ರಂದು ಶಟಲ್ ಬ್ಯಾಡ್‌ಮಿಂಟನ್ ಸ್ಪರ್ಧೆ ನಡೆಯಲಿವೆ ಎಂದು ಮಾಹಿತಿ ನೀಡಿದರು.
ಕ್ರೀಡಾಕೂಟದಲ್ಲಿ ಸರ್ಕಾರಿ ಖಾಯಂ ನೌಕರರು ಮಾತ್ರ ಪಾಲ್ಗೊಳ್ಳಬಹುದಾಗಿದ್ದು, ಕ್ರೀಡಾ ಇಲಾಖೆಯ ನೌಕರರು, ದೈಹಿಕ ಶಿಕ್ಷಕರು ಪಾಲ್ಗೊಳ್ಳುವಂತಿಲ್ಲ. ಇಲಾಖಾ ಮುಖ್ಯಸ್ಥರಿಂದ ಸಹಿ ಮಾಡಿದ ಗುರುತಿನ ಚೀಟಿ ಕಡ್ಡಾಯವಾಗಿದ್ದು, ಸಮವಸ್ತç ಧರಿಸುವ ಇಲಾಖೆಯ ನೌಕರರು ಪಾಲ್ಗೊಳ್ಳಲು ಅವಕಾಶವಿಲ್ಲ. ಹೆಚ್ಚಿನ ಮಾಹಿತಿಗಾಗಿ ೯೪೪೮೫೦೪೬೩೬ ದೂರವಾಣಿ ಸಂಖ್ಯೆ ಸಂಪರ್ಕಿಸುವAತೆ ಅವರು ಮನವಿ ಮಾಡಿದರು.
ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಡಿ.ಎಂ. ರೇವತಿ ಮಾತನಾಡಿ, ಸರ್ಕಾರಿ ನೌಕರರಿಗಾಗಿ ಸಂಗೀತ, ನೃತ್ಯ, ವಾದ್ಯ ಸಂಗೀತ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಸಂಘದ ಗೌರವ ಕಾರ್ಯದರ್ಶಿ ಎಸ್.ಟಿ. ಶಮಿ, ಉಪಾಧ್ಯಕ್ಷ ಚಿಣ್ಣಯ್ಯ, ನಿರ್ದೇಶಕ ಲೋಕಪ್ರಭು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.