ಮಡಿಕೇರಿ, ಫೆ. ೧೫: ನಗರಾಭಿವೃದ್ಧಿಗೆ ಸಂಬAಧಿಸಿದAತೆ ನಡೆಸಬೇಕಾದ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಕೈಗೊಂಡು ಪೂರ್ಣಗೊಳಿಸಬೇಕು ಇಲ್ಲವಾದರೆ ಸಂಬAಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಮ್ಮ ಇಲಾಖೆಗೆ ಸಂಬAಧಿಸಿದAತೆ ಅಧಿಕಾರಿಗಳ ಸಭೆ ನಡೆಸಿ ಕಾಮಗಾರಿಗಳ ಪ್ರಗತಿಯ ಮಾಹಿತಿ ಪಡೆದು ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಗರ ವ್ಯಾಪ್ತಿಯಲ್ಲಿ ನೀರು ಸರಬರಾಜಿಗೆ ಸಂಬAಧಿಸಿದAತೆ ಕೆಲಸ ಕಾರ್ಯಗಳು ಸಮರ್ಪಕವಾಗಿ ನಡೆಯದ ಬಗ್ಗೆ ದೂರು ವ್ಯಕ್ತಗೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಗಂಭೀರ ಚರ್ಚೆ ನಡೆಸಿದ್ದೇನೆ. ನೀರು ಸರಬರಾಜು ಸಂಬAಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸೂಚನೆ ನೀಡಿದ್ದೇನೆ ಎಂದು ಸಚಿವರು ಹೇಳಿದರು.
ಮಲೀನ ನೀರನ್ನು ಶುದ್ಧೀಕರಣಗೊಳಿಸುವ ಸಂಬAಧ ಜಾಗದ ಕೊರತೆ ಇರುವ ಬಗ್ಗೆ ತಿಳಿದು ಬಂದಿದ್ದು, ಈ ಹಿನ್ನೆಲೆಯಲ್ಲಿ ಜಾಗ ಹುಡುಕಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಒಳಚರಂಡಿ ಕಾಮಗಾರಿ ಸಂದರ್ಭ ಹಾನಿಗೊಳಗಾದ ರಸ್ತೆಗಳಿಗೆ ಕಾಂಕ್ರಿಟ್ ಹಾಕಿ ಸರಿಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಅಪೂರ್ಣಗೊಂಡಿರುವ ಒಳ ಚರಂಡಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ. ಕೆರೆಗಳ ಅಭಿವೃದ್ಧಿಗೆ ಸಂಬAಧಿಸಿದAತೆ ಯೋಜನಾ ವರದಿಯನ್ನು ತಯಾರು ಮಾಡಿ ಕೆರೆಗಳ ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಕ್ರಮಕೈಗೊಳ್ಳುವಂತೆಯು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವ ಬಸವರಾಜ ಹೇಳಿದರು.
ಒಳಚರಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್ ಜಾಗ ಒತ್ತುವರಿ ಆಗಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಆ ಒತ್ತುವರಿಯನ್ನು ಕೂಡಲೇ ತೆರವು ಮಾಡಲು ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದರು. ಈ ಎಲ್ಲಾ ಕಾರ್ಯಗಳನ್ನು ಆದಷ್ಟು ಶೀಘ್ರವಾಗಿ ಕೈಗೊಳ್ಳಬೇಕು. ಅಧಿವೇಶನದ ಬಳಿಕ ತಾನು ಮತ್ತೊಮ್ಮೆ ಜಿಲ್ಲೆಗೆ ಆಗಮಿಸಲಿದ್ದು, ಆ ವೇಳೆಗೆ ಈ ಎಲ್ಲಾ ಕೆಲಸಗಳು ಪೂರ್ಣ ಗೊಂಡಿರಬೇಕೆAದು ತಾನು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದೇನೆ ಎಂದು ಸಚಿವರು ತಿಳಿಸಿದರು.
ಈ ಸಂದರ್ಭ ಶಾಸಕರುಗಳಾದ ಕೆ.ಜಿ. ಬೋಪಯ್ಯ, ಅಪ್ಪಚ್ಚುರಂಜನ್, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಸಿಇಓ ಭಂವರ್ಸಿAಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ ಉಪಸ್ಥಿತರಿದ್ದರು.