ಮಡಿಕೇರಿ, ಫೆ. ೧೫: ಮಡಿಕೇರಿ ನಗರದಲ್ಲಿ ಮಲೀನ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಕೂಡಲೇ ಜಾಗ ಒದಗಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಅವರು ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಡಿಕೇರಿ ನಗರದಲ್ಲಿ ಮಲೀನ ನೀರು ಶುದ್ಧೀಕರಣ ಘಟಕ ನಿರ್ಮಾಣಕ್ಕೆ ೫೦ ಕೋಟಿ ರೂ. ಹಣವಿದೆ. ಆದರೆ ಇದುವರೆಗೆ ಜಾಗ ಗುರುತಿಸದೆ ಹಣ ಸದ್ಭಳಕೆಯಾಗಿಲ್ಲ. ನಗರದ ಅಭಿವೃದ್ಧಿ ದೃಷ್ಟಿಯಿಂದ ಶೀಘ್ರ ಜಾಗ ಗುರುತಿಸಿ ಭೂಮಿ ಪೂಜೆ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡುವಂತೆ ಬಿ.ಎ.ಬಸವರಾಜ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮುಂದಿನ ಅಧಿವೇಶನ ನಂತರ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದು, ಆ ಸಂದರ್ಭದಲ್ಲಿ ಭೂಮಿ ಪೂಜೆ ನೆರವೇರಿಸಲು

(ಮೊದಲ ಪುಟದಿಂದ) ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ನಿರ್ದೇಶನ ನೀಡಿದರು.

ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತದೆ. ಆದರೆ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದು ಕೇಳಿ ಬರುತ್ತದೆ. ಆದ್ದರಿಂದ ಕುಡಿಯುವ ನೀರಿನ ಮೂಲವನ್ನು ಸಂರಕ್ಷಿಸಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದAತೆ ಗಮನಹರಿ ಸುವುದು ಅತ್ಯಗತ್ಯ. ನಗರ, ಪಟ್ಟಣ ಪಂಚಾಯಿತಿ ವ್ಯಾಪ್ತಿಗಳಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಾರದು. ಹಳೆಯ ಪೈಪು ಮತ್ತು ಮೋಟಾರುಗಳನ್ನು ಬದಲಿಸಿ ಕುಡಿಯುವ ನೀರು ಪೂರೈಸುವಂತೆ ಸಚಿವರು ನಿರ್ದೇಶನ ನೀಡಿದರು.

ಸೋಮವಾರಪೇಟೆಯಲ್ಲಿ ವ್ಯತ್ಯಯ ಉಂಟಾಗದAತೆ ಗಮನಹರಿ ಸುವುದು ಅತ್ಯಗತ್ಯ. ನಗರ, ಪಟ್ಟಣ ಪಂಚಾಯಿತಿ ವ್ಯಾಪ್ತಿಗಳಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಾರದು. ಹಳೆಯ ಪೈಪು ಮತ್ತು ಮೋಟಾರುಗಳನ್ನು ಬದಲಿಸಿ ಕುಡಿಯುವ ನೀರು ಪೂರೈಸುವಂತೆ ಸಚಿವರು ನಿರ್ದೇಶನ ನೀಡಿದರು.

ಸೋಮವಾರಪೇಟೆಯಲ್ಲಿ ಮಳೆಯಾಗುವುದರಿಂದ ಹೊಸ ತಂತ್ರಜ್ಞಾನ ಅಳವಡಿಸಿ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಬೇಕು. ಮಳೆಗಾಲ ಆರಂಭಕ್ಕೂ ಮೊದಲು ಕಾಮಗಾರಿಗಳನ್ನು ಪೂರ್ಣಗೊಳಿಸು ವಂತೆ ನಗರಾಭಿವೃದ್ಧಿ ಸಚಿವರು ನಿರ್ದೇಶನ ನೀಡಿದರು.

ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವ ಹಿಸಿದಾಗ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಹುದು. ಆದ್ದರಿಂದ ಸಮನ್ವಯತೆಯಿಂದ ಕಾರ್ಯನಿರ್ವ ಹಿಸಬೇಕು. ವಿಧಾನ ಪರಿಷತ್ತಿನಲ್ಲಿ ಮಡಿಕೇರಿ ನಗರ ಮತ್ತು ಮೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸಂಬAಧಿಸಿದAತೆ ಸಚಿವರ ಗಮನ ಸೆಳೆದ ಹಿನ್ನೆಲೆ ಕೊಡಗು ಜಿಲ್ಲೆಗೆ ಖುದ್ದು ಭೇಟಿ ನೀಡಿದ್ದಾರೆ. ಆ ನಿಟ್ಟಿನಲ್ಲಿ ಅಭಿವೃದ್ಧಿ ಕೆಲಸಗಳು ಆಗಬೇಕು ಎಂದರು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ ಮಡಿಕೇರಿ ಮತ್ತು ಮೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದAತೆ ಅಧಿಕಾರಿಗಳು ಗಮನ ಹರಿಸಬೇಕು. ನಗರಾಭಿವೃದ್ಧಿ ವ್ಯಾಪ್ತಿಗೆ ಸಂಬAಧಿಸಿ ದಂತೆ ಇನ್ನಷ್ಟು ಮುತುವರ್ಜಿ ವಹಿಸಬೇಕು ಎಂದು ಅವರು ಹೇಳಿದರು.

ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಮೇಶ್ ಹೊಳ್ಳ ಮಾತನಾಡಿ ಮೂಡಾದಿಂದ ಇದುವರೆಗೆ ಯಾವುದೇ ಬಡಾವಣೆ ಅಭಿವೃದ್ಧಿ ಪಡಿಸಿಲ್ಲ ಎಂದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯ ಅಭಿಯಂತರ ಸಿದ್ದನಾಯಕ ಅವರು ಮಾಹಿತಿ ನೀಡಿ ಮಡಿಕೇರಿ ನಗರಕ್ಕೆ ಕೂಟುಹೊಳೆ ಮತ್ತು ಕುಂಡಾಮೇಸ್ತಿç ಹೊಳೆಯಿಂದ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದರು.

ಕುಂಡಾಮೇಸ್ತಿç ಹೊಳೆಯಲ್ಲಿ ಜಾಕ್‌ವೆಲ್ ನಿರ್ಮಾಣ ಮಾಡ ಲಾಗಿದೆ. ಸ್ಟೋನ್‌ಹಿಲ್ ಬಳಿ ಜಲ ಶುದ್ಧೀಕರಣ ಘಟಕ ಕಾರ್ಯ ನಿರ್ವಹಿಸುತ್ತಿದೆ. ಕುಂಡಾಮೇಸ್ತಿç ಹೊಳೆಗೆ ಬ್ಯಾರೇಜ್ ನಿರ್ಮಾಣ ಮಾಡಬೇಕಿದೆ. ಮಡಿಕೇರಿ ನಗರ ನಗರೋತ್ಥಾನ ಮೂರನೇ ಯೋಜನೆ ಯಡಿ ೮ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್. ರೂಪ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ರಾಜು, ನಗರಸಭೆ ಪೌರಾಯುಕ್ತ ಎಸ್.ವಿ. ರಾಮದಾಸ್, ಭೂ ದಾಖಲೆಗಳ ಸಹಾಯಕ ನಿರ್ದೇಶಕ ವಿರೂಪಾಕ್ಷ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಇ ರಾಜ್ ಗೋಪಾಲ್, ಎಇಇ ಅಜಯ್, ನಗರಾಭಿವೃದ್ಧಿ ಕೋಶದ ಎಇಇ ನಾಗರಾಜು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಶ್ರೀಧರ, ನಾಚಪ್ಪ, ಸುಜಯ್ ಕುಮಾರ್, ನಗರಾಭಿವೃದ್ಧಿ ಯೋಜನ ಶಾಖೆಯ ಸಹಾಯಕ ನಿರ್ದೇಶಕಿ ಲಾವಣ್ಯ ಇತರರು ತಮ್ಮ ನಗರದ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬAಧಿಸಿದAತೆ ಮಾಹಿತಿ ನೀಡಿದರು.

ಪರಿಶೀಲನೆ: ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರು ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ವತಿಯಿಂದ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಸುವ ಕೂಟುಹೊಳೆ ಮತ್ತು ಕುಂಡಾಮೇಸ್ತಿç ಯೋಜನೆ ವೀಕ್ಷಿಸಿದರು. ಹಾಗೆಯೇ ಮಲೀನ ನೀರು ಶುದ್ಧೀಕರಣ ಘಟಕ ನಿರ್ಮಿಸುವ ಜಾಗವನ್ನು ಪರಿಶೀಲಿಸಿದರು.