ಪೊನ್ನಂಪೇಟೆ, ಫೆ. ೧೬: ಇಂದು ಸಂಜೆ ಪೊನ್ನಂಪೇಟೆ ಕುಂದ ರಸ್ತೆಯಲ್ಲಿ ಆಲ್ಟೊ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಇಲ್ಲಿನ ಕಾವೇರಿ ನಗರದಲ್ಲಿ ವಾಸವಾಗಿರುವ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ಗೂಳಿ ಅವರು ತಮ್ಮ ಆಲ್ಟೊ ಕಾರು(ಕೆ.ಎ.೨೫.೭೪೩೭)ವಿನಲ್ಲಿ ಪೊನ್ನಂಪೇಟೆ ಪಟ್ಟಣದ ಕಡೆಗೆ ಕಾರು ಚಲಾಯಿಸಿಕೊಂಡು ಬರುತ್ತಿದ್ದ ಸಂದರ್ಭ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದ ಪೊನ್ನಂಪೇಟೆ ಪಿಎಸ್‌ಐ ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.