ಮುಳ್ಳೂರು, ಫೆ. ೧೭: ತಾಲೂಕು ಕಾನೂನು ಸೇವಾ ಸಮಿತಿ, ಸೋಮವಾರಪೇಟೆ ವಕೀಲರ ಸಂಘ, ತಾಲೂಕು ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕರ ಇಲಾಖೆ, ಪೊಲೀಸ್ ಇಲಾಖೆ ಮತ್ತು ಕೊಡಗು ಜಿಲ್ಲಾ ಕಟ್ಟಡ ನಿರ್ಮಾಣ ಕಾರ್ಮಿಕರ ಹಾಗೂ ಶನಿವಾರಸಂತೆ ಕೂಲಿ ಕಾರ್ಮಿಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರಸಂತೆ ಕಾರ್ಮಿಕರ ಸಂಘದ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾರ್ಮಿಕರ ಮಕ್ಕಳಿಗೆ ಶಿಕ್ಷಣದ ಅವಶ್ಯಕತೆ ಇದ್ದು ಈ ನಿಟ್ಟಿನಲ್ಲಿ ಕಾರ್ಮಿಕರ ಪೋಷಕರು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವಂತೆ ಕರೆ ನೀಡಿದರು. ಕಾರ್ಮಿಕರು ಕಾನೂನು ಅರಿವು ಹೊಂದಿರಬೇಕು ಅದೇರೀತಿ ಪ್ರತಿಯೊಬ್ಬರೂ ಕಾನೂನಿಗೆ ಮುಳ್ಳೂರು, ಫೆ. ೧೭: ತಾಲೂಕು ಕಾನೂನು ಸೇವಾ ಸಮಿತಿ, ಸೋಮವಾರಪೇಟೆ ವಕೀಲರ ಸಂಘ, ತಾಲೂಕು ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕರ ಇಲಾಖೆ, ಪೊಲೀಸ್ ಇಲಾಖೆ ಮತ್ತು ಕೊಡಗು ಜಿಲ್ಲಾ ಕಟ್ಟಡ ನಿರ್ಮಾಣ ಕಾರ್ಮಿಕರ ಹಾಗೂ ಶನಿವಾರಸಂತೆ ಕೂಲಿ ಕಾರ್ಮಿಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರಸಂತೆ ಕಾರ್ಮಿಕರ ಸಂಘದ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾರ್ಮಿಕರ ಮಕ್ಕಳಿಗೆ ಶಿಕ್ಷಣದ ಅವಶ್ಯಕತೆ ಇದ್ದು ಈ ನಿಟ್ಟಿನಲ್ಲಿ ಕಾರ್ಮಿಕರ ಪೋಷಕರು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವಂತೆ ಕರೆ ನೀಡಿದರು. ಕಾರ್ಮಿಕರು ಕಾನೂನು ಅರಿವು ಹೊಂದಿರಬೇಕು ಅದೇರೀತಿ ಪ್ರತಿಯೊಬ್ಬರೂ ಕಾನೂನಿಗೆ ಗೌರವಕೊಡಬೇಕಾಗುತ್ತದೆ ಎಂದರು. ಕಾರ್ಮಿಕರಿಗೆ ಕಾನೂನಿನ ನೆರವು ಅಗತ್ಯ ಇರುವ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸಬಹುದಾಗಿದೆ ಎಂದರು
ಸೋಮವಾರಪೇಟೆ ತಾಲೂಕು ಪ್ರಧಾನ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಮಾತನಾಡಿ, ಕಾರ್ಮಿಕರ ಮಕ್ಕಳು ವಿದ್ಯಾವಂತರಾಗುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು, ಕಾನೂನು ನೆರವು ಅಗತ್ಯ ಇರುವ ಸಂದರ್ಭದಲ್ಲಿ ಉಚಿತ ಕಾನೂನು ಅರಿವು ಮೂಲಕ ವಾಗಿಯೂ ಕಾನೂವು ಅರಿವು ಮೂಡಿಸಲು ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘವು ವ್ಯವಸ್ಥೆ ಮಾಡಿಕೊಡುತ್ತದೆ ಎಂದರು.
ಜಿಲ್ಲಾ ಕಾರ್ಮಿಕರ ಇಲಾಖೆ ಅಧಿಕಾರಿ ಅನಿಲ್ ಬಾಲಚಂದ್ರ ಭಗಟಿ ಮಾತನಾಡಿ, ಕಾರ್ಮಿಕರ ಇಲಾಖೆಯಿಂದ ಕಾರ್ಮಿಕರಿಗೆ ಮತ್ತು ಕಾರ್ಮಿಕರ ಮಕ್ಕಳಿಗೆ ಹಲವಾರು ಸೌಲಭ್ಯವನ್ನು ನೀಡಲಾಗುತ್ತಿದ್ದು ಇವುಗಳನ್ನು ಸದುಪಯೋಗಿಸಿ ಕೊಳ್ಳಬೇಕು, ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮುಂತಾದವುಗಳಿಗೆ ಇಲಾಖೆ ವತಿಯಿಂದ ಸೇವಾ ಸವಲತ್ತುಗಳನ್ನು ನೀಡಲಾಗುತ್ತಿರುವ ನಿಟ್ಟಿನಲ್ಲಿ ಕಾರ್ಮಿಕರು ಸಂಘಟಿತ ರಾಗುವ ಮೂಲಕ ಇಲಾಖೆಯ ನೆರವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಸೋಮವಾರಪೇಟೆ ವಕೀಲರ ಸಂಘದ ಅಧ್ಯಕ್ಷ ಡಿ.ಕೆ. ತಿಮ್ಮಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾನೂನಿನ ಅರಿವು ಹೊಂದಿದ್ದರೆ ಅಪರಾಧ ಪ್ರಕರಣಗಳು ಕಡಿಮೆಯಾಗುತ್ತದೆ, ವಕೀಲರ ಸಂಘದ ವತಿಯಿಂದ ಕಾರ್ಮಿಕರ ಸಂಘಟನೆಗಳಿಗೆ ಪ್ರತಿವರ್ಷ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಕಾನೂನಿನ ಬಗ್ಗೆ ಸೋಮವಾರಪೇಟೆ ವಕೀಲ ಹೆಚ್.ಎಸ್. ಚಂದ್ರಶೇಖರ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶನಿವಾರಸಂತೆ ಠಾಣಾಧಿಕಾರಿ ದೇವರಾಜ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್‌ಕುಮಾರ್, ಕಾರ್ಮಿಕರ ಇಲಾಖೆ ನಿರೀಕ್ಷಕ ಕೆ.ಎನ್. ಲೀನಾ, ವಿಘ್ನೇಶ್ವರ ಬಾಲಕಿಯರ ಪ್ರೌಢಶಾಲಾ ಶಿಕ್ಷಕ ಕೆ.ಪಿ. ಜಯಕುಮಾರ್ ಮುಂತಾದವರಿದ್ದರು. ಈ ಸಂದರ್ಭ ವಿವಿಧ ಕಾರ್ಮಿಕರಿಗೆ ಸನ್ಮಾನ ಮಾಡಲಾಯಿತು.
- ಭಾಸ್ಕರ್ ಮುಳ್ಳೂರು