ಇಂಗ್ಲೆAಡ್ ವಿರುದ್ಧ ಅತೀ ದೊಡ್ಡ ಜಯ
ಚೆನ್ನೆöÊ, ಫೆ. ೧೬: ಇಂಗ್ಲೆAಡ್ ವಿರುದ್ಧದ ೨ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ೩೧೭ ರನ್‌ಗಳ ಭಾರಿ ಅಂತರದ ಗೆಲುವು ಸಾಧಿಸಿದ್ದು, ಇದು ಇಂಗ್ಲೆAಡ್ ವಿರುದ್ಧ ಟೀಂ ಇಂಡಿಯಾ ಸಾಧಿಸಿದ ಅತಿ ದೊಡ್ಡ ಗೆಲುವಾಗಿದೆ. ಇಂದು ಚೆನ್ನೆöÊನಲ್ಲಿ ಮುಕ್ತಾಯಗೊಂಡ ೨ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆAಡ್ ತಂಡವನ್ನು ಭಾರತ ತಂಡ ೩೧೭ ರನ್‌ಗಳ ಭಾರಿ ಅಂತರದಲ್ಲಿ ಮಣಿಸಿದ್ದು, ಭಾರತ ಇಂಗ್ಲೆAಡ್ ತಂಡದ ವಿರುದ್ಧ ಸಾಧಿಸಿದ ಅತೀ ದೊಡ್ಡ ಗೆಲುವು ಇದಾಗಿದೆ. ಈ ಹಿಂದೆ ೧೯೮೬ ರಲ್ಲಿ ಇಂಗ್ಲೆAಡಿನ ಲೀಡ್ಸ್ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಇಂಗ್ಲೆAಡ್ ತಂಡವನ್ನು ೨೭೯ ರನ್‌ಗಳ ಅಂತರದಲ್ಲಿ ಮಣಿಸಿತ್ತು. ಇದು ಈವರೆಗಿನ ದೊಡ್ಡ ಗೆಲುವಾಗಿತ್ತು. ಆದರೆ ಇಂದು ಈ ಗೆಲುವನ್ನೂ ಮೀರಿಸುವಂತೆ ೩೧೭ ರನ್‌ಗಳ ಅಂತರದಲ್ಲಿ ಜಯ ಸಾಧಿಸಿದೆ. ಪಂದ್ಯದಲ್ಲಿ ೮ ವಿಕೆಟ್ ಹಾಗೂ ಒಂದು ಶತಕ ಭಾರಿಸಿದ ರವಿಚಂದ್ರನ್ ಅಶ್ವಿನ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.
ದೇಣಿಗೆ ನೀಡಲು ಸಿದ್ಧರಾಮಯ್ಯ ನಿರಾಕರಣೆ
ನವದೆಹಲಿ, ಫೆ. ೧೬: ರಾಜ್ಯದಲ್ಲಿ ರಾಮ ಮಂದಿರ ನಿರ್ಮಾಣ ಸಂಬAಧ ದೇಣಿಗೆ ಸಂಗ್ರಹ ನಡೆಯುತ್ತಿದ್ದು, ವಿರೋಧ ಪಕ್ಷಗಳು ಬಿಜೆಪಿ ಮತ್ತು ಆರ್.ಎಸ್.ಎಸ್. ವಿರುದ್ಧ ಕಿಡಿಕಾರುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ದೇಣಿಗೆ ಕೊಡದವರ ಮನೆಯನ್ನು ಮಾರ್ಕ್ ಮಾಡಿ ಹೋಗುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ದೇಣಿಗೆ ಸಂಗ್ರಹ ಸಂಬAಧ ನನ್ನ ಮನೆಗೂ ಬಂದಿದ್ದರೂ ಆದರೆ ನಾನು ದೇಣಿಗೆ ಕೊಡುವುದಿಲ್ಲ, ಹೋಗಿ ಎಂದು ಹೇಳಿದ್ದಾಗಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಮಂದಿರ ನಿರ್ಮಾಣ ಸಂಬAಧ ಎಷ್ಟು ದೇಣಿಗೆ ಸಂಗ್ರಹವಾಗಿದೆ ಎಂಬ ಮಾಹಿತಿ ನೀಡುತ್ತಾರೊ, ಇಲ್ಲವೊ ಎಂಬುದಾಗಿ ಕೂಡ ಅವರು ಪ್ರಶ್ನಿಸಿದ್ದಾರೆ. ವಿವಾದಿತ ಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ನೀಡುವುದಿಲ್ಲ. ಅದರ ಬದಲಿಗೆ ಬೇರೆ ಕಡೆ ಕಟ್ಟುವುದಾದರೆ ದೇಣಿಗೆ ನೀಡುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸಿದ್ದರಾಮಯ್ಯ ಯಾವ ಅರ್ಥದಲ್ಲಿ ವಿವಾದಿತ ಮಂದಿರ ಎಂದು ಹೇಳುತ್ತಿದ್ದಾರೋ ಗೊತ್ತಿಲ್ಲ. ದೇಶದ ಪರಮೋಚ್ಛ ನ್ಯಾಯಾಲಯ ಸುಪ್ರೀಂ ಕೋರ್ಟ್, ಇದು ಹಿಂದೂಗಳಿಗೆ ಸೇರಿದ ಜಾಗ ಎಂದು ತೀರ್ಪು ನೀಡಿದ ಬಳಿಕವೂ ಸಿದ್ದರಾಮಯ್ಯ ಇದನ್ನು ವಿವಾದಿತ ಮಂದಿರ ಎಂದು ಕರೆದಿರುವುದು ಎಷ್ಟು ಸರಿ ಎಂದು ಮರು ಪ್ರಶ್ನೆ ಹಾಕಿದ್ದಾರೆ.
ಭಾರತಕ್ಕೆ ಮರಳಿದ ನಾಲ್ವರಿಗೆ ರೂಪಾಂತರಿ ಕೊರೊನಾ ವೈರಸ್
ನವದೆಹಲಿ, ಫೆ. ೧೬: ಬ್ರಿಟನ್ ನಂತರ ಈಗ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿರುವ ದಕ್ಷಿಣ ಆಫ್ರಿಕಾದ ರೂಪಾಂತರಿ ಕೊರೊನಾ ವೈರಸ್ ಈಗ ಭಾರತಕ್ಕೂ ವಕ್ಕರಿಸಿದ್ದು, ದೇಶದಲ್ಲಿ ನಾಲ್ಕು ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಐಸಿಎಂಆರ್ ಡೈರೆಕ್ಟರ್ ಜನರಲ್ ಬಲರಾಮ್ ಭಾರ್ಗವ ಅವರು, ಕಳೆದ ಜನವರಿಯಲ್ಲಿ ಆಫ್ರಿಕಾದಿಂದ ಭಾರತಕ್ಕೆ ಮರಳಿದ ನಾಲ್ವರಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರ ಕೊರೊನಾ ವೈರಸ್ ಪತ್ತೆಯಾಗಿದೆ ಎಂದು ಹೇಳಿದರು. ಭಾರತದಲ್ಲಿ, ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ ನಾಲ್ವರಲ್ಲಿ ದಕ್ಷಿಣ ಆಫ್ರಿಕಾದ ಕೋವಿಡ್-೧೯ ಪತ್ತೆಯಾಗಿದೆ. ಎಲ್ಲಾ ಪ್ರಯಾಣಿಕರು ಹಾಗೂ ಅವರ ಸಂಪರ್ಕಿತರನ್ನು ಪರೀಕ್ಷಿಸಲಾಗಿದೆ ಮತ್ತು ಅವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಮನೆ ಬಾಗಿಲಿಗೆ ಕಂದಾಯ ಇಲಾಖೆ, “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ”
ಬೆಂಗಳೂರು, ಫೆ. ೧೬: ಸಾರ್ವಜನಿಕರು ಸಣ್ಣ ಪುಟ್ಟ ಕೆಲಸಗಳಿಗೂ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಕಂದಾಯ ಇಲಾಖೆ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಎಂಬ ನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ತಾ. ೨೦ ರಂದು ಕಂದಾಯ ಇಲಾಖೆಯ ಅಧಿಕಾರಿಗಳು ಹಳ್ಳಿಗಳಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಜಿಲ್ಲಾಧಿಕಾರಿಗಳು, ಕಂದಾಯ ಇಲಾಖೆಯ ಗುಮಾಸ್ತರನ್ನು ಹೊರತುಪಡಿಸಿ ಉಳಿದ ಅಧಿಕಾರಿ ಸಿಬ್ಬಂದಿಗಳು ಪ್ರತಿ ತಿಂಗಳ ಮೂರನೇ ಶನಿವಾರದಂದು ಗ್ರಾಮಗಳಿಗೆ ಭೇಟಿ ನೀಡಿ, ಹಳ್ಳಿ ವಾಸ್ತವ್ಯ ಮಾಡಲಿದ್ದಾರೆ ಎಂದು ಹೇಳಿದರು. ಹಳ್ಳಿಗಳಿಗೆ ಭೇಟಿ ನೀಡುವ ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಹಳ್ಳಿಯ ಯಾವುದೇ ಮುಖ್ಯಸ್ಥರು, ಮುಖಂಡರ ಮನೆಯಲ್ಲಿ ಭೋಜನ, ಉಪಹಾರ ಸೇವಿಸುವಂತಿಲ್ಲ. ಸರ್ಕಾರಿ ಶಾಲೆಗಳಲ್ಲಿ, ಎಸ್.ಸಿ. ಹಾಗೂ ಎಸ್.ಟಿ. ವಸತಿ ನಿಲಯದಲ್ಲಿ ಭೋಜನ ಸ್ವೀಕರಿಸಬೇಕು. ಗ್ರಾಮಗಳಿಗೆ ಭೇಟಿ ನೀಡುವ ಒಂದು ವಾರದ ಮೊದಲೇ ಕಂದಾಯ ಅಧಿಕಾರಿಗಳು, ಗ್ರಾಮ ಭೇಟಿ ಸಂದರ್ಭದಲ್ಲಿ ನೀಡಲಾಗಿರುವ ಕಾರ್ಯಸೂಚಿಗಳನ್ವಯ ಫಲಾನುಭವಿಗಳ ಅರ್ಜಿಗಳನ್ನು ಸಂಗ್ರಹಿಸಿ, ಅರ್ಜಿಗಳ ಮೇಲೆ ಯಾರ ಹಂತದಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಲೇವಾರಿಯಾಗಿರುವ ಬಗ್ಗೆ ಸಂಬAಧಪಟ್ಟ ಫಲಾನುಭವಿಗಳಿಗೆ ತಿಳಿಸುವುದು. ಅರ್ಜಿಗಳ ಮೇಲೆ ಬೇರೆ ಬೇರೆ ಹಂತದಲ್ಲಿ ವಿಚಾರಣೆಯ ಅವಶ್ಯಕತೆ ಇದ್ದಲ್ಲಿ ಅದನ್ನು ಪೂರ್ಣಗೊಳಿಸಲು ಕ್ರಮ ತೆಗೆದುಕೊಳ್ಳಬೇಕು ಎಂದರು.
ಭಾಸ್ಕರ್‌ರಾವ್ ವರ್ಗಾವಣೆ
ಬೆಂಗಳೂರು, ಫೆ. ೧೬: ಈ ಹಿಂದೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿ ನಂತರ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಹಾಗೂ ಬೆಂಗಳೂರಿನ ಆಂತರಿಕ ಭದ್ರತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಭಾಸ್ಕರ್‌ರಾವ್ ಅವರನ್ನು ಬೆಂಗಳೂರು ರೈಲ್ವೇಸ್‌ನ ‘ಎಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್’ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.