ನಾಪೋಕ್ಲು, ಫೆ. ೧೬: ಸಮೀಪದ ನೆಲಜಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ ತಾ. ೧೮ ರಂದು ನಡೆಯಲಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಚೀಯಕಪೂವಂಡ ಅಪ್ಪಚ್ಚು ತಿಳಿಸಿದ್ದಾರೆ.

ಕಟ್ಟಡದ ಉದ್ಘಾಟನೆಯನ್ನು ಸಂಸದ ಪ್ರತಾಪ್‌ಸಿಂಹ ನೆರವೇರಿಸಲಿದ್ದಾರೆ. ಕಟ್ಟಡದ ಬ್ಯಾಂಕ್ ಕಚೇರಿಯನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದಾರೆ. ಮಳಿಗೆ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ನೆರವೇರಿಸುವರು. ಬ್ಯಾಂಕ್ ಕೌಂಟರ್ ಉದ್ಘಾಟನೆಯನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ. ಗಣಪತಿ ಹಾಗೂ ಭದ್ರತಾ ಕೊಠಡಿಯ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನುಮುತ್ತಪ್ಪ ನೆರವೇರಿಸುವರು. ಸಭಾಂಗಣದ ಉದ್ಘಾಟನೆಯನ್ನು ಕೊಡಗು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ನೆರವೇರಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ಸಂಘದ ಅಧ್ಯಕ್ಷ ಚೀಯಕಪೂವಂಡ ಅಪ್ಪಚ್ಚು ವಹಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಕಾನೂನು ಸಚಿವ ಮೇರಿಯಂಡ ಸಿ. ನಾಣಯ್ಯ, ಸಹಕಾರಿ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ, ಸಹಾಯಕ ನಿಬಂಧಕ ಹೆಚ್.ಡಿ. ರವಿಕುಮಾರ್, ನಬಾರ್ಡ್ ಸಹಾಯಕ ಮಹಾ ಪ್ರಬಂಧಕ ಪಿ.ವಿ. ಶ್ರೀನಿವಾಸ್, ನಿವೃತ್ತ ಸಹಾಯಕ ಮಹಾ ಪ್ರಬಂಧಕÀ ಮುಂಡAಡ ಸಿ. ನಾಣಯ್ಯ ಪಾಲ್ಗೊಳ್ಳಲಿದ್ದಾರೆ.