ಕುಶಾಲನಗರ, ಫೆ. ೧೬: ದಲಿತ ವಿದ್ಯಾರ್ಥಿಗೆ ಶಾಲಾ ಪ್ರವೇಶ ನಿರಾಕರಣೆ ಮಾಡಿದ ಹಿನ್ನಲೆಯಲ್ಲಿ ಕೊಪ್ಪ ಸಮೀಪದ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ದಲಿತ ಪ್ರಗತಿಪರ ಹೋರಾಟ ಸಂಘಟನೆಗಳು ನಡೆಸುತ್ತಿರುವ ಧರಣಿ ೫ನೇ ದಿನಕ್ಕೆ ಕಾಲಿಟ್ಟಿದೆ. ಕೊಪ್ಪ ಗಿರಗೂರು ಠಾಣಾ ವ್ಯಾಪ್ತಿಯ ಮಿಳಿಂದ ವಿದ್ಯಾಸಂಸ್ಥೆಯಲ್ಲಿ ದಲಿತ ವಿದ್ಯಾರ್ಥಿಯೊಬ್ಬನ ಪೋಷಕರು ಸಂಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಪ್ರಶ್ನೆ ಮಾಡಿದ ಹಿನ್ನಲೆಯಲ್ಲಿ ಶಾಲೆಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಆರೋಪಿಸಿ ಸ್ಥಳೀಯ ಕೆಲವು ಸಂಘಟನೆಗಳ ಪ್ರಮುಖರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ನ್ಯಾಯ ದೊರಕುವ ತನಕ ಪ್ರತಿಭಟನೆ ಮುಂದುವರೆ ಯುವುದು ಎಂದು ಪ್ರಮುಖರಾದ ಶ್ರೀನಿವಾಸ್ ತಿಳಿಸಿದ್ದಾರೆ.