ಕುಶಾಲನಗರ, ಫೆ. ೧೬: ಕುಶಾಲ ನಗರದ ನಗರ ಪೊಲೀಸ್ ಠಾಣೆ ವತಿಯಿಂದ ಪರಿಶಿಷ್ಟ ಜಾತಿ ಸಮುದಾಯದವರ ಕುಂದುಕೊರತೆ ಸಭೆ ಡಿವೈಎಸ್ಪಿ ಹೆಚ್.ಎಂ. ಶೈಲೇಂದ್ರ ಅಧ್ಯಕ್ಷತೆಯಲ್ಲಿ ನಡೆಯಿತು.

ಪೊಲೀಸ್ ವಿಶ್ರಾಂತಿ ಗೃಹದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಡಿವೈಎಸ್ಪಿ ಶೈಲೇಂದ್ರ, ಪ.ಜಾತಿ ಕಾಲೋನಿಗಳಲ್ಲಿನ ಸಮಸ್ಯೆಗಳ ಬಗ್ಗೆ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಪತ್ರ ವ್ಯವಹಾರ ನಡೆಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಲು ಶಿಫಾರಸು ಮಾಡಲಾಗುವುದು. ಕಾಲೋನಿಗಳಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಗಳು ಕಂಡುಬAದಲ್ಲಿ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸುವಂತೆ ಸಲಹೆ ನೀಡಿದರು. ಪ್ರತಿಯೊಬ್ಬರೂ ಕಡ್ಡಾಯವಾಗಿ ಸಂಚಾರಿ ನಿಮಯಗಳನ್ನು ಪಾಲಿಸುವಂತೆ ಸೂಚಿಸಿದರು.

ಕುಶಾಲನಗರ ಠಾಣಾಧಿಕಾರಿ ಗಣೇಶ್ ಮಾತನಾಡಿ, ಕಾಲೋನಿಗಳಲ್ಲಿ ಫ್ಲೆಕ್ಸ್ ಬೋರ್ಡ್ಗಳನ್ನು ಅಳವಡಿಸುವ ಸಂದರ್ಭ ಸಂಬAಧಪಟ್ಟ ಪಂಚಾಯಿತಿಯಿAದ ಅನುಮತಿ ಪಡೆದು ನಿರ್ದಿಷ್ಟವಾದ ಸಮಯದಲ್ಲಿ ಅದನ್ನು ತೆರವುಗೊಳಿಸಬೇಕು. ಕುಶಾಲನಗರ ಟೌನ್ ಕಾಲೋನಿಯ ಮುಖ್ಯ ಬೀದಿಗಳಲ್ಲಿ ಆಡು, ಕುರಿ, ಮೇಕೆಗಳ ಹಾವಳಿಯಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದ್ದು ಕೂಡಲೇ ಸಾಕುಪ್ರಾಣಿಗಳ ಮಾಲೀಕರು ಈ ಬಗ್ಗೆ ಗಮನಹರಿಸಿ ತಮ್ಮ ಸಾಕುಪ್ರಾಣಿಗಳನ್ನು ರಸ್ತೆಗೆ ಬಿಡದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದÀರು.

ಈ ಸಂದರ್ಭ ವೃತ್ತ ನಿರೀಕ್ಷಕ ಎಂ.ಮಹೇಶ್, ಕರ್ನಾಟಕ ಮಾನವ ಹಕ್ಕುಗಳ ಜನ ಜಾಗೃತಿ ವೇದಿಕೆಯ ರಾಜ್ಯ ಮಾಧ್ಯಮ ಘಟಕದ ಅಧ್ಯಕ್ಷ ಕೆ.ಟಿ. ಶ್ರೀನಿವಾಸ್, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಕೆ.ಬಿ.ರಾಜು, ಕರ್ನಾಟಕ ಮಾನವ ಹಕ್ಕುಗಳ ಜನ ಜಾಗೃತಿ ವೇದಿಕೆಯ ಕಾವೇರಿ ತಾಲೂಕು ಅಧ್ಯಕ್ಷ ಹೆಚ್.ಟಿ. ವಸಂತ್, ಅಂಬೇಡ್ಕರ್ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ಜಯಪ್ರಕಾಶ್, ಪ್ರಮುಖ ರಾದ ಹೆಜ್.ಜೆ. ದಾಮೋದರ, ಎಚ್. ಆರ್. ವೆಂಕಟೇಶ್, ಚೆನ್ನಯ್ಯ ಸಿ.ಜೆ., ಮಹದೇವ್, ರುದ್ರಾಂಬಿಕೆ ಮತ್ತಿತರರು ಇದ್ದರು.