ಮಡಿಕೇರಿ, ಫೆ. ೧೬: ಪಶುಸಂಗೋಪನೆ ಇಲಾಖೆ ನನ್ನ ಪರಿವಾರ ಇದ್ದಂತೆ. ಕುಟುಂಬದ ಪ್ರಮುಖನಾಗಿ ನಿಮ್ಮ ಸಮಸ್ಯೆಗಳನ್ನು ಆಲಿಸಲು ಸದಾಸಿದ್ದ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.
ಮಡಿಕೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪಶುಸಂಗೋಪನೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು ಇಲಾಖೆಯ ಸಮಸ್ಯೆಗೆ ಸ್ಪಂದಿಸಲು ನಾನು ಸದಾ ಸಿದ್ಧನಿದ್ದೇನೆ. ಆದರೆ ಇಲಾಖೆ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.
ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಮೊದಲು ನಮ್ಮ ಅಧಿಕಾರಿಗಳು ಅಧ್ಯಯನ ಮಾಡಬೇಕು ಇಲ್ಲವಾದರೆ ಗೋಹತ್ಯೆ ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲು ಸಮಸ್ಯೆ ಆಗುತ್ತದೆ ಎಂದು ಇಲಾಖೆಯ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. ಕಳೆದ ೧೪ ವರ್ಷಗಳಿಂದ ಇಲಾಖೆಯಲ್ಲಿ ಬಡ್ತಿ ಆಗಿರಲಿಲ್ಲ ತಾನು ಅಧಿಕಾರವಹಿಸಿಕೊಂಡ ನಂತರ ಆದ್ಯತೆ ಮೇಲೆ ಇದನ್ನು ಬಗೆಹರಿಸಿದ್ದೇನೆ ಎಂದು ಸಚಿವರು ಹೇಳಿದರು.
ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ಕೋವಿಡ್ ನಿಂದಾಗಿ ಸ್ವಲ್ಪ ವಿಳಂಬವಾಗಿದೆ. ಮುಂದಿನ ದಿನಗಳಲ್ಲಿ ಖಾಲಿ ಹುದ್ದೆ ಭರ್ತಿಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಗೋಹತ್ಯೆ ನಿಷೇಧ ಜಾರಿಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದು ಒಂದು ಗೋವು ಸಹ ಕಸಾಯಿಖಾನೆಗೆ ಹೋಗದಂತೆ ನೋಡಿಕೊಳ್ಳಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಾಕಿ ಇರುವ ಎಲ್ಲ ಅಧಿವೃದ್ಧಿ ಕೆಲಸಗಳನ್ನು ಆದ್ಯತೆಯಲ್ಲಿ ಕೈಗೆತ್ತಿಕೊಂಡು ಪೂರ್ಣಗೊಳಿಸಿ ಎಂದು ಹೇಳಿದರು.
ರೈತರ ಕರೆಗಳನ್ನು ಆಲಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಸಿಬ್ಬಂದಿ ಕೊರತೆ ಮುಂದಿಟ್ಟುಕೊAಡು ಕರ್ತವ್ಯದಿಂದ ವಿಮುಖರಾಗಬೇಡಿ. ಸದ್ಯದಲ್ಲೇ ಮಡಿಕೇರಿಗೂ ಸುಸಜ್ಜಿತ ಪಶುಶಾಸ್ತç ಚಿಕಿತ್ಸಾ ವಾಹನ ‘ಪಶುಸಂಜೀವಿನಿ’ ನೀಡಲಾಗುವುದು. ರೈತರ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಿ ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು. ಮಡಿಕೇರಿ ತಾಲೂಕಿನಲ್ಲಿ ಇರುವ ಗೋಮಾಳ ಜಾಗವನ್ನು ಗುರುತಿಸಿ ಮೇವು ಬೆಳೆಯಲು ಆದ್ಯತೆ ನೀಡಿ ಹಾಗೂ ಒತ್ತುವರಿ ತೆರವಿಗೆ ಜಿಲ್ಲಾಡಳಿತ ಬೇಗ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಇಲಾಖೆಯ ಸಮಗ್ರವಾದ ಪ್ರಗತಿ ಪರಿಶೀಲನೆ ನಡೆಸಿ ಹಕ್ಕಿಜ್ವರದ ಪ್ರಕರಣ, ಕಾಲುಬಾಯಿರೋಗ ನಿಯಂತ್ರಣ, ಕೃತಕ ಗರ್ಭಧಾರಣೆ, ಲಂಪಿಸ್ಕಿನ್, ಮೇವಿನ ಲಭ್ಯತೆ, ಕಿಸಾನ್ ಸಂಪರ್ಕ, ಜಾನುವಾರುಗಳಿಗೆ ಆರೋಗ್ಯ ಶಿಬಿರ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಭೆಯಲ್ಲಿ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಮೀನಾ, ಅಪರ ಜಿಲ್ಲಾಧಿಕಾರಿ ಡಿ. ರೂಪ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಹಾಗೂ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.