ಕುಶಾಲನಗರ, ಫೆ. ೧೭: ಕುಶಾಲನಗರ ಪಟ್ಟಣಕ್ಕೆ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಹಾರಂಗಿ ಅಣೆಕಟ್ಟೆಯಿಂದ ನೀರು ಸರಬರಾಜು ಯೋಜನೆಗೆ ಹಸಿರು ನಿಶಾನೆ ದೊರೆತಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಅವರು ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಶುದ್ಧ ಕುಡಿವ ನೀರಿನ ಘಟಕಕ್ಕೆ ಚಾಲನೆ ನೀಡಿ ಸುದ್ದಿಗಾರ ರೊಂದಿಗೆ ಮಾತನಾಡಿದರು. ಹಾರಂಗಿಯಿAದ ಕುಶಾಲನಗರ ಮತ್ತು ಸುತ್ತಮುತ್ತಲ ವ್ಯಾಪ್ತಿಯ ಗ್ರಾಮಗಳಿಗೆ ೨೪x೭ ಶುದ್ಧ ಕುಡಿಯುವ ನೀರು ಒದಗಿಸಲು ಅಂದಾಜು ೮೫ ಕೋಟಿ ರೂ. ವೆಚ್ಚದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ. ನಗರಾಭಿವೃದ್ಧಿ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಅವರೊಂದಿಗೆ ಈ ಬಗ್ಗೆ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದರೊಂದಿಗೆ ಪ್ರಧಾನಮಂತ್ರಿ ಜಲಜೀವನ್ ಮಿಷನ್ ಯೋಜನೆ ಯಡಿಯಲ್ಲಿ ಈಗಾಗಲೇ ೫೯ ಕೋಟಿ ರೂ. ಬಿಡುಗಡೆಯಾಗಿದ್ದು ೨೦೨೨ರ ಒಳಗೆ ಗ್ರಾಮೀಣ ಪ್ರದೇಶಗಳ ಪ್ರತಿಯೊಂದು ಮನೆಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆ ಒದಗಲಿದೆ ಎಂದು ತಿಳಿಸಿದರು. ಕುಶಾಲನಗರ ಪಪಂ ವ್ಯಾಪ್ತಿಯ ಬೈಚನಹಳ್ಳಿ, ದಂಡಿನಪೇಟೆ ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕರು ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಶಾಸಕ ರಂಜನ್, ದಂಡಿನಪೇಟೆಯ ಮಸೀದಿ ಅಭಿವೃದ್ಧಿಗೆ ರೂ. ೨೦ ಲಕ್ಷ ಅನುದಾನ ಕಲ್ಪಿಸುವ ಭರವಸೆ ನೀಡಿದರು. ಪಂಚಾಯಿತಿ ವ್ಯಾಪ್ತಿಯ ಯಡಿಯಲ್ಲಿ ಈಗಾಗಲೇ ೫೯ ಕೋಟಿ ರೂ. ಬಿಡುಗಡೆಯಾಗಿದ್ದು ೨೦೨೨ರ ಒಳಗೆ ಗ್ರಾಮೀಣ ಪ್ರದೇಶಗಳ ಪ್ರತಿಯೊಂದು ಮನೆಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆ ಒದಗಲಿದೆ ಎಂದು ತಿಳಿಸಿದರು. ಕುಶಾಲನಗರ ಪಪಂ ವ್ಯಾಪ್ತಿಯ ಬೈಚನಹಳ್ಳಿ, ದಂಡಿನಪೇಟೆ ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕರು ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಶಾಸಕ ರಂಜನ್, ದಂಡಿನಪೇಟೆಯ ಮಸೀದಿ ಅಭಿವೃದ್ಧಿಗೆ ರೂ. ೨೦ ಲಕ್ಷ ಅನುದಾನ ಕಲ್ಪಿಸುವ ಭರವಸೆ ನೀಡಿದರು. ಪಂಚಾಯಿತಿ ವ್ಯಾಪ್ತಿಯ ಸುಮಾರು ೧ ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಖಾಸಗಿ ಬಸ್ ನಿಲ್ದಾಣದಲ್ಲಿ ಬಹುತೇಕ ಮೂಲ ಸೌಕರ್ಯಗಳನ್ನು ಒದಗಿಸ ಲಾಗಿದೆ ಎಂದು ತಿಳಿಸಿದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಸದÀ್ಯದಲ್ಲೇ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸುವ ಚಿಂತನೆ ಇರುವುದಾಗಿ ತಿಳಿಸಿದರು.

ಈ ಸಂದರ್ಭ ಕುಡಾ ಅಧ್ಯಕ್ಷ ಎಂ.ಎA. ಚರಣ್ ಮತ್ತು ಸದಸ್ಯರು, ಪ.ಪಂ. ಉಪಾಧ್ಯಕ್ಷೆ ಸುರಯ್ಯಭಾನು, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ. ಸುರೇಶ್ ಸೇರಿದಂತೆ ಸದಸ್ಯರು, ಮುಖ್ಯಾಧಿಕಾರಿ ಸುಜಯ್‌ಕುಮಾರ್ ಮತ್ತಿತರರು ಇದ್ದರು.