ಮಡಿಕೇರಿ ಫೆ. ೧೭: ವಿಶ್ವದ ಗಮನ ಸೆಳೆದಿರುವ ಕೊಡವ ಕೌಟುಂಬಿಕ ಹಾಕಿ ಹಬ್ಬಕ್ಕೆ ಪ್ರತಿವರ್ಷ ಬಜೆಟ್‌ನಲ್ಲಿ ರೂ. ೫ ಕೋಟಿ ಅನುದಾನ ಮೀಸಲಿಡುವಂತೆ ಒತ್ತಾಯಿಸಿ ಬೆಂಗಳೂರು ಕೊಡವ ಸಮಾಜದ ನೇತೃತ್ವದಲ್ಲಿ ವಿವಿಧ ಕೊಡವ ಸಮಾಜಗಳು ಹಾಗೂ ಜನಪ್ರತಿನಿಧಿಗಳ ನಿಯೋಗ ತಾ. ೧೮ ರಂದು (ಇಂದು) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದೆ.

ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವಕುಮಾರ್ ನಾಣಯ್ಯ ಅವರ ಮುಂದಾಳತ್ವದಲ್ಲಿ ನಾಪೋಕ್ಲು ಕೊಡವ ಸಮಾಜದ ಪ್ರತಿನಿಧಿಗಳು ಹಾಕಿ ಅಕಾಡೆಮಿ ಹಾಗೂ ಸಂಸದ ಪ್ರತಾಪ್ ಸಿಂಹ ಅವರ ಶಿಫಾರಸ್ಸಿನ ಮನವಿ ಪತ್ರದೊಂದಿಗೆ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಎಂ.ಟಿ. ನಾಣಯ್ಯ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಜೆ. ಪುಟ್ಟಸ್ವಾಮಿ ಅವರನ್ನು ಭೇಟಿಯಾದರು. ಮುಖ್ಯಮಂತ್ರಿಗಳ ಭೇಟಿಗೆ ತಾ. ೧೮ ರಂದು ಅವಕಾಶ ಕಲ್ಪಿಸಿದರು. ಬೆಂಗಳೂರಿನಲ್ಲಿ ಬಿ.ಜೆ. ಪುಟ್ಟಸ್ವಾಮಿ ಅವರಿಗೆ ಮನವಿ ಸಲ್ಲಿಸುವ ಸಂದರ್ಭ ನಾಪೋಕ್ಲು ಕೊಡವ ಸಮಾಜದ ಕಾರ್ಯದರ್ಶಿ ಕುಲ್ಲೇಟಿರ ಅಜಿತ್ ನಾಣಯ್ಯ, ಕುಲ್ಲೇಟಿರ ಬಿನ್ನಿ ಬೋಪಣ್ಣ, ಮುಕ್ಕಾಟಿರ ಪೂಣಚ್ಚ ಮತ್ತಿತರರು ಹಾಜರಿದ್ದರು.