ಮಡಿಕೇರಿ, ಫೆ. ೧೭: ಮಡಿಕೇರಿ ತಾಲೂಕು ಪಂಚಾಯಿತಿ ಸಾಮರ್ಥ್ಯ ಸಭಾಂಗಣದಲ್ಲಿ ನೂತನವಾಗಿ ಗ್ರಾಮ ಪಂಚಾಯಿತಿಗಳಿಗೆ ಆಯ್ಕೆಯಾದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ಜಿ. ಬೋಪಯ್ಯ, ೫ ದಿನಗಳ ಕಾಲ ನಡೆಯುವ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಲು ಕರೆ ನೀಡಿದರು. ಪಂಚಾಯತ್ ರಾಜ್ ಕಾಯ್ದೆಯನ್ನು ಅರಿತುಕೊಂಡು ಕಾನೂನಿನ ಚೌಕಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಲು ಹಾಗೂ ತಮ್ಮ ತಮ್ಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಶ್ರಮಿಸುವಂತೆ ತಿಳಿಸಿದರು. ತಾ.ಪಂ ಕಾರ್ಯನಿರ್ವಹಣಾಧಿಕಾರಿ ಲಕ್ಷಿö್ಮÃ ಅವರು ಮಾತನಾಡಿ ಸಾಮರ್ಥ್ಯ ಸೌಧವನ್ನು ತರಬೇತಿ ಸಂಬAಧ ಅರ್ಥಪೂರ್ಣವಾಗಿ ವಿನ್ಯಾಸಗೊಳಿಸಲಾಗಿದೆ. ಪಂಚಾಯತ್ ರಾಜ್ ಯೋಜನೆಗಳನ್ನು ಗೋಡೆಗಳ ಮೇಲೆ ಚಿತ್ರೀಕರಿಸಲಾಗಿದೆ. ತರಬೇತುದಾರರು ಇವುಗಳನ್ನು ಗಮನಿಸಿ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ, ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭ ಮೋಹನ್, ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆಯ ರಾಜ್ಯ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಹಾಗೂ ತರಬೇತುದಾರರು ಹಾಜರಿದ್ದರು. ಮೊದಲನೆಯ ತಂಡದಲ್ಲಿ ನಾಪೋಕ್ಲು ಗ್ರಾ.ಪಂ.ನ ೨೩ ಸದಸ್ಯರು, ಎಮ್ಮೆಮಾಡು ಗ್ರಾ.ಪಂ.ನ ೭ ಹಾಗೂ ಕರಿಕೆ ಗ್ರಾ.ಪಂ.ನ ೧೧ ಸದಸ್ಯರು ಭಾಗವಹಿಸಲಿದ್ದಾರೆ.