ಮಡಿಕೇರಿ, ಫೆ. ೧೭: ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ವಿಶೇಷ ಸಾಧನೆಗೈದ ೧೮ ವರ್ಷದ ಒಳಗಿನ ಮಕ್ಕಳಿಗೆ “ಬಾಲಗೌರವ ಪ್ರಶಸ್ತಿ” ಪ್ರದಾನ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯಿಂದ ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ವಿಶೇಷ ಸಾಧನೆಗೈದ ೧೮ ವರ್ಷದ ಒಳಗಿನ ಮಕ್ಕಳಿಗೆ “ಬಾಲಗೌರವ ಪ್ರಶಸ್ತಿ’ ಪ್ರದಾನ ಮಾಡಲು ಉದ್ದೇಶಿಸಲಾಗಿದೆ. ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ವಿಶೇಷ ಸಾಧನೆಗೈದ ೧೮ ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳು ಸಂಗೀತ, ನೃತ್ಯ, ನಟನೆ, ಕ್ರೀಡೆ ಮತ್ತು ಚಿತ್ರಕಲೆ, ಕರಕುಶಲ, ಬರವಣಿಗೆ, ಸಂಶೋಧನೆ (ಹೊಸ ಆವಿಷ್ಕಾರ) ಈ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ಪ್ರಶಸ್ತಿ ಪುರಷ್ಕೃತ ಮಗುವಾಗಿರಬೇಕು. ಇಂತಹ ಮಕ್ಕಳು `ಅಕಾಡೆಮಿ ಬಾಲ ಗೌರವಪ್ರಶಸ್ತಿ’ಗೆ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ-ವಿವರಗಳ ನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆಎಚ್‌ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-೫೮೦೦೦೪ ಇಲ್ಲಿಗೆ ತಾ. ೨೦ ರೊಳಗೆ ಅರ್ಜಿಗಳು ತಲಪುವಂತೆ ಕಳಿಸುವುದು. ಅರ್ಜಿ ಸಲ್ಲಿಸುವಾಗ `ಅಕಾಡೆಮಿ ಬಾಲಗೌರವ ಪ್ರಶಸ್ತಿಗೆ ಅರ್ಜಿ’ ಎಂದು ಲಕೋಟೆ ಮೇಲೆ ನಮೂದಿಸಿರಬೇಕು.

ಹೆಚ್ಚಿನ ಮಾಹಿತಿಗೆ ಯೋಜನಾಧಿಕಾರಿಗಳು, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಎಚ್.ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-೫೮೦೦೦೪ ಕಚೇರಿ ದೂರವಾಣಿ ಸಂ.೦೮೩೬-೨೪೬೧೬೬೬ ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಅಥ್ಲೆಟಿಕ್ಸ್ ಮತ್ತು ಹಾಕಿ ಕ್ರೀಡೆಯಲ್ಲಿ ೨೦೨೧-೨೨ ನೇ ಸಾಲಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆಯು ಜಿಲ್ಲಾ ಮಟ್ಟದಲ್ಲಿ ತಾ. ೨೨ ಮತ್ತು ೨೩ ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.