ಸುಂಟಿಕೊಪ್ಪ, ಫೆ. ೧೭: ಏಳನೇ ಹೊಸಕೋಟೆ ಗ್ರಾಮದ ನಿವಾಸಿ ಹಾಗೂ ಏಳನೇ ಹೊಸಕೋಟೆ ಗ್ರಾ.ಪಂ. ಮಾಜಿ ಅಧ್ಯಕ್ಷರಾಗಿದ್ದ ಹೆಚ್.ವಿ. ಮಂಜುನಾಥ್ (೫೨) ಎಂಬವರು ತಾ. ೧೭ ರಂದು ಬೆಳಿಗ್ಗೆ ೧೧ ಗಂಟೆಗೆ ತಮ್ಮ ನಿವಾಸದ ಬಳಿಯ ಜಮೀನಿನಲ್ಲಿದ್ದ ಹಲಸಿನ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರು ಪತ್ನಿ ಸೇರಿದಂತೆ ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮೃತರು ಸುಂಟಿಕೊಪ್ಪದ ಸೆಂಟ್ರಲ್ ಬ್ಯಾಂಕ್ ಹಾಗೂ ಏಳನೇ ಹೊಸಕೋಟೆ ಗ್ರಾಮದ ಯೂನಿಯನ್ ಬ್ಯಾಂಕಿನಲ್ಲಿ ಸಾಲವಿತ್ತು ಎನ್ನಲಾಗಿದ್ದು, ಸಾಲದ ಬಾಧೆಯಿಂದ ಬೇಸತ್ತು ಸಾವಿಗೀಡಾಗಿರುವ ಬಗ್ಗೆ ಪತ್ನಿ ರಾಣಿ ಮಾಹಿತಿ ನೀಡಿದ್ದಾರೆ. ಈ ಸಂಬAಧ ಸುಂಟಿಕೊಪ್ಪ ಠಾಣೆಯಲ್ಲಿ ದೂರು ದಾಖಲಾಗಿದೆ.