ಶನಿವಾರಸಂತೆ, ಫೆ. ೧೭: ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತç ಉಪನ್ಯಾಸಕರಾದ ಕುಮಾರಸ್ವಾಮಿ
(೫೮) ಅವರು ತಾ. ೧೭ರಂದು ಹೃದಯಾಘಾತದಿಂದ ನಿಧನರಾದರು.
ಕುಮಾರಸ್ವಾಮಿ ಅವರು ಕೆ.ಆರ್. ನಗರ ತಾಲೂಕಿನ ಗಂಧನ ಹಳ್ಳಿಯ ನಿವಾಸಿಯಾಗಿದ್ದು, ಭಾರತಿ ವಿದ್ಯಾಸಂಸ್ಥೆಯಲ್ಲಿ ಸುಮಾರು ೨೫ ವರ್ಷಗಳ ಕಾಲ ಅರ್ಥಶಾಸ್ತç ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕುಮಾರಸ್ವಾಮಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಭಾರತಿ ವಿದ್ಯಾಸಂಸ್ಥೆ ಶಾಲಾ - ಕಾಲೇಜಿಗೆ ರಜೆ ಘೋಷಿಸಲಾಗಿತ್ತು.