ಮಡಿಕೇರಿ,ಫೆ.೧೯: ರಥಸಪ್ತಮಿ ಅಂಗವಾಗಿ ಇಲ್ಲಿನ ಮಹದೇವಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ದೇವಿಯ ವಿಗ್ರಹವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಬೆಳಿಗ್ಗೆಯಿಂದಲೇ ಪೂಜಾದಿ ಕಾರ್ಯಗಳು ನಡೆದು ಮಧ್ಯಾಹ್ನ ಮಹಾ ಮಂಗಳಾರತಿಯೊAದಿಗೆ ಸಮಾಪ್ತಿಗೊಂಡಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು. ಮಧ್ಯಾಹ್ನ ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.