*ಗೋಣಿಕೊಪ್ಪ, ಫೆ. ೧೯: ಶಾಲಾ ಅಭಿವೃದ್ಧಿ ಸಮಿತಿಯ ನಿಯಮ ಮತ್ತು ನಿರ್ವಹಣೆಯ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಿತು.
ಟಿ. ಶೆಟ್ಟಿಗೇರಿ ಕ್ಲಸ್ಟರ್ ವ್ಯಾಪ್ತಿಯ ಬೇಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬಿ.ಆರ್.ಪಿ. ಯಲ್ಲಪ್ಪಪೂಜಾರಿ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.
ಶಾಲಾಭಿವೃದ್ಧಿ ಸಮಿತಿಯ ಮೇಲುಸ್ತುವಾರಿಯಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಕ್ರಮಕೈಗೊಳ್ಳುವ ಬಗ್ಗೆ ಈ ಸಂದರ್ಭ ಮಾಹಿತಿ ನೀಡಲಾಯಿತು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಬಯವಂಡ ಉತ್ತಪ್ಪ ಅವರು ಎಸ್.ಡಿ.ಎಂ.ಸಿ ಸಮಿತಿ ಮತ್ತು ರಚನೆ ಕಾರ್ಯ ಸಭೆಗಳ ಬಗ್ಗೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಸಪೂರ ಮತ್ತು ಅನಿತಾಕುಮಾರಿ ತರಬೇತಿಯ ವಿವರಣೆಯನ್ನು ನೀಡಿದರು. ಟಿ.ಶೆಟ್ಟಿಗೇರಿ ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಾಡ ಜೀವನ್, ಮುಖ್ಯ ಶಿಕ್ಷಕಿ ಸುಜಾತ ಹಾಗೂ ಎಸ್.ಡಿ.ಎಂ.ಸಿ. ಸದಸ್ಯರು ಹಾಜರಿದ್ದರು.