ನಾಪೋಕ್ಲು, ಫೆ. ೧೮: ರೂ. ೧.೩೫ ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೆಲಜಿ ಕೃಷಿ ಪತ್ತಿನ ಸಹಕಾರ ಸಂಘದ ವಾಣಿಜ್ಯ ಕಟ್ಟಡವನ್ನು ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಪ್ರತಾಪ್ ಸಿಂಹ ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ಸೌಲಭ್ಯಗಳ ನ್ನೊಳಗೊಂಡ ಕಟ್ಟಡ ನಿರ್ಮಿಸಿರುವದು ಶ್ಲಾಘನೀಯ. ಸಂಸದರ ಅನುದಾನ ಬಿಡುಗಡೆಯ ಬಳಿಕ ಕಟ್ಟಡಕ್ಕೆ ಅನುದಾನ ನೀಡುವದಾಗಿ ಭರವಸೆ ನೀಡಿದರು.

ಸಂಕೀರ್ಣದ ಉದ್ಘಾಟನೆ ಯನ್ನು ತಾ. ೧೮ ರಂದು ನಡೆಸಲು ಉದ್ದೇಶಿಸಲಾಗಿತ್ತು. ಸಂಸದರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಹಿನೆÀ್ನಲೆ ಒಂದು ದಿನ ಮುಂಚಿತವಾಗಿ ಉದ್ಘಾಟಿಸ ಲಾಗಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಬಲ್ಲಮಾವಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಣವಟ್ಟಿರ ಹರೀಶ್, ನಬಾರ್ಡ್ ಸಂಸ್ಥೆಯ ನಿವೃತ್ತ ಸಹಾಯಕ ಮಹಾಪ್ರಬಂಧಕ ಮುಂಡAಡ ನಾಣಯ್ಯ, ಸಂಘದ ಸದಸ್ಯರು, ಗ್ರಾಮಸ್ಥರು ಇದ್ದರು.