ಕೂಡಿಗೆ, ಫೆ. ೧೮: ಸಮಾಜದಲ್ಲಿ ಜಾತಿ ಧರ್ಮ ಮೇಲು ಕೀಳೆಂಬ ಭಾವನೆಯನ್ನು ತೊರೆದು ನಾವೆಲ್ಲಾ ಒಂದೇ ಎಂಬ ಭಾವನೆಯಿಂದ ಇದ್ದರೆ ಶಾಂತಿ ನೆಮ್ಮದಿ ಹಾಗೂ ಸಹಬಾಳ್ವೆಯಿಂದ ಜೀವನ ನಡೆಸಲು ಸಾಧ್ಯ ಎಂದು ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಿದರು. ತೊರೆನೂರು ಬಸವೇಶ್ವರ ದೇವರ ನೂತನ ಗರ್ಭಗುಡಿಯ ಲೋಕಾರ್ಪಣೆ ಕೂಡಿಗೆ, ಫೆ. ೧೮: ಸಮಾಜದಲ್ಲಿ ಜಾತಿ ಧರ್ಮ ಮೇಲು ಕೀಳೆಂಬ ಭಾವನೆಯನ್ನು ತೊರೆದು ನಾವೆಲ್ಲಾ ಒಂದೇ ಎಂಬ ಭಾವನೆಯಿಂದ ಇದ್ದರೆ ಶಾಂತಿ ನೆಮ್ಮದಿ ಹಾಗೂ ಸಹಬಾಳ್ವೆಯಿಂದ ಜೀವನ ನಡೆಸಲು ಸಾಧ್ಯ ಎಂದು ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಿದರು. ತೊರೆನೂರು ಬಸವೇಶ್ವರ ದೇವರ ನೂತನ ಗರ್ಭಗುಡಿಯ ಲೋಕಾರ್ಪಣೆ ಶಿಲಾಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಕೊಡ್ಲಿಪೇಟೆ ಶ್ರೀ ಮಹಾಂತಸ್ವಾಮೀಜಿ ಮಾತನಾಡಿ, ಸಮಾಜದ ಐಕ್ಯತೆಗೆ ಎಲ್ಲರೂ ಒಂದಾಗಿ ದುಡಿದಾಗ ಸಮಾಜದಲ್ಲಿ ಉನ್ನತಿ ಕಾಣಲು ಸಾಧ್ಯ ಎಂದರು.

ಕಿರುಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಬಸವಪಟ್ಟಣ ಬಸವಕಲ್ಯಾಣ ಮಠದ ಶ್ರೀ ಬಸವಲಿಂಗ ಶಿವಾಚಾರ್ಯ ಸ್ವಾಮಿ ಮತ್ತು ತೊರೆನೂರು ವಿರಕ್ತ ಮಠದ ಮಲ್ಲೇಶ ಸ್ವಾಮೀಜಿ, ದಿಂಡಗಾಡು ಶ್ರೀ ಅಪ್ಪಾಜಿ ಸ್ವಾಮಿ ಆಶೀರ್ವಚನ ನೀಡಿದರು.

ದೇವಾಲಯ ಸಮಿತಿಯ ಅಧ್ಯಕ್ಷ ಹೆಚ್.ಬಿ. ಚಂದ್ರಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಟಿ.ಟಿ. ಪ್ರಕಾಶ್, ಕಾರ್ಯದರ್ಶಿ ಟಿ.ಹೆಚ್. ಸೋಮಾಚಾರಿ, ಖಜಾಂಚಿ ಜಗದೀಶ್ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್. ಕೃಷ್ಣೇಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಮಹೇಶ್, ಉಪಾಧ್ಯಕ್ಷರಾದ ಬೇಬಿ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಕೆ.ಬಿ. ದೇವರಾಜ್, ಟಿ.ಸಿ. ಶಿವಕುಮಾರ್, ಮಂಜುನಾಥ ಸೇರಿದಂತೆ ಕಾರ್ಯಕಾರಿ ಮಂಡಳಿಯವರು, ಸಲಹಾ ಸಮಿತಿಯ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು. ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರನ್ನು ಗೌರವಿಸಲಾಯಿತು.