ಸೋಮವಾರಪೇಟೆ, ಫೆ. ೧೮: ಸೋಮವಾರಪೇಟೆ, ಶಾಂತಳ್ಳಿ, ಶನಿವಾರಸಂತೆ, ಕೊಡ್ಲಿಪೇಟೆ ಮತ್ತು ಆಲೂರುಸಿದ್ದಾಪುರ ವ್ಯಾಪ್ತಿಯ ಉಪವಿಭಾಗದ ಗ್ರಾಹಕರ ಸಂಪರ್ಕ ಸಭೆ ತಾ. ೨೦ರಂದು ಬೆಳಿಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಧನಂಜಯ ತಿಳಿಸಿದ್ದಾರೆ.

ಸಾರ್ವಜನಿಕರು, ವಿದ್ಯುತ್ ಗ್ರಾಹಕರು ತಮ್ಮ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಸಭೆಯಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದ್ದಾರೆ.