ಮಡಿಕೇರಿ, ಫೆ. ೧೯: ಯಶಸ್ವೀ ೧೧೦ ದಿನಗಳ ಪ್ರದರ್ಶನ ಕಂಡ “ಕೊಡಗ್‌ರ ಸಿಪಾಯಿ” ಚಿತ್ರದ ನಿರ್ದೇಶಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ನಿರ್ದೇಶಿಸುತ್ತಿರುವ ಕಾದಂಬರಿ ಆಧಾರಿತ, ಮಹಿಳಾ ಪ್ರಧಾನ ಕಥಾವಸ್ತುವಿನ "ನಾಡಪೆದ ಆಶಾ" ಕೊಡವ ಚಲನಚಿತ್ರದ ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿದೆ.

"ಗಿಏ೩ PIಅಖಿUಖಇS" ಸಂಸ್ಥೆಯ ಮುಖ್ಯಸ್ಥರು ಹಾಗೂ ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ಉತ್ತಯ್ಯ ಹಾಗೂ ಈರಮಂಡ ಪೊನ್ನಮ್ಮ ಉತ್ತಯ್ಯ ಅವರು ನಿರ್ಮಿಸುತ್ತಿರುವ ಚಿತ್ರದ ಚಿತ್ರೀಕರಣವನ್ನು ಮೂರ್ನಾಡುವಿನ ಕೋಡಂಬೂರು ಗ್ರಾಮದ ಶ್ರೀ ಭದ್ರಕಾಳಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆರಂಭಿಸಲಾಯಿತು.

ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಮಾತನಾಡಿ, ಕೊಡವ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕೊಡವ ಸಿನಿಮಾಗಳು ಕೂಡ ಸಹಕಾರಿಯಾಗಿವೆ ಎಂದರು.

ಚಿತ್ರೀಕರಣಕ್ಕೆ ಚಾಲನೆ ನೀಡಿದ ಕೋಡಂಬೂರು ಶ್ರೀ ಭದ್ರಕಾಳಿ ದೇವಾಲಯದ ಅಧ್ಯಕ್ಷ ಹಾಗೂ ಗ್ರಾ.ಪಂ. ಸದಸ್ಯ ಮೂಡೇರ ಅಶೋಕ್ ಅಯ್ಯಪ್ಪ ಅವರು ಕೊಡವ ಭಾಷೆಯ ಚಲನಚಿತ್ರಗಳಿಗೆ ಎಲ್ಲರ ಪ್ರೋತ್ಸಾಹದ ಅಗತ್ಯವಿದೆ ಎಂದು ತಿಳಿಸಿದರು. ಚಿತ್ರದ ನಿರ್ದೇಶಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರು ಮಾತನಾಡಿ, ವರ್ಷಕ್ಕೊಂದು ಕೊಡವ ಸಿನಿಮಾವನ್ನು ನಿರ್ದೇಶಿಸುವುದಾಗಿ ತಿಳಿಸಿದರು.

ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯ ಡಾ. ಮೇಚಿರ ಸುಭಾಷ್ ನಾಣಯ್ಯ ಅವರು ಚಿತ್ರ ಯಶಸ್ವಿ ಯಾಗುವ ವಿಶ್ವಾಸ ವ್ಯಕ್ತಪಡಿಸಿದರು. "ನಾಡಪೆದ ಆಶಾ" ಕಾದಂಬರಿ ರಚನೆಕಾರ, ಹಿರಿಯ ಸಾಹಿತಿ ನಾಗೇಶ್ ಕಾಲೂರು ಮಾತನಾಡಿ, ಅಂಗನವಾಡಿ ಕಾರ್ಯಕರ್ತೆ ಯೊಬ್ಬಳ ಬದುಕಿನ ಮಹಿಳಾ ಪ್ರಧಾನ ಕಥಾವಸ್ತುವಿನ ಬಗ್ಗೆ ವಿವರಿಸಿದರು.

ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ಉತ್ತಯ್ಯ, ಈರಮಂಡ ಪೊನ್ನಮ್ಮ ಉತ್ತಯ್ಯ, ಕಾರ್ಯಕಾರಿ ನಿರ್ಮಾಪಕ ಹಾಗೂ ನಾಯಕ ನಟ ಬೊಳ್ಳಜಿರ ಬಿ. ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯ ಡಾ. ಮೇಚಿರ ಸುಭಾಷ್ ನಾಣಯ್ಯ ಅವರು ಚಿತ್ರ ಯಶಸ್ವಿ ಯಾಗುವ ವಿಶ್ವಾಸ ವ್ಯಕ್ತಪಡಿಸಿದರು. "ನಾಡಪೆದ ಆಶಾ" ಕಾದಂಬರಿ ರಚನೆಕಾರ, ಹಿರಿಯ ಸಾಹಿತಿ ನಾಗೇಶ್ ಕಾಲೂರು ಮಾತನಾಡಿ, ಅಂಗನವಾಡಿ ಕಾರ್ಯಕರ್ತೆ ಯೊಬ್ಬಳ ಬದುಕಿನ ಮಹಿಳಾ ಪ್ರಧಾನ ಕಥಾವಸ್ತುವಿನ ಬಗ್ಗೆ ವಿವರಿಸಿದರು.

ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ಉತ್ತಯ್ಯ, ಈರಮಂಡ ಪೊನ್ನಮ್ಮ ಉತ್ತಯ್ಯ, ಕಾರ್ಯಕಾರಿ ನಿರ್ಮಾಪಕ ಹಾಗೂ ನಾಯಕ ನಟ ಬೊಳ್ಳಜಿರ ಬಿ.