ಶನಿವಾರಸಂತೆ, ಫೆ. ೨೦: ಕೊಡ್ಲಿಪೇಟೆ ಪೊಲೀಸ್ ಉಪಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಮತ್ತು ಬೀಟ್ ಸಭೆ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ನಡೆಸಲಾಯಿತು. ಬ್ಯಾಡಗೊಟ್ಟ ಬೀಟ್ ಪೊಲೀಸ್ ಪ್ರವೀಣ್ ಕುಮಾರ್ ಹಾಗೂ ಸಹಾಯಕ ಠಾಣಾಧಿಕಾರಿ ಕೃಷ್ಣೇಗೌಡ ಅವರಗಳು ಗ್ರಾಮಸ್ಥರನ್ನು ಉದ್ದೇಶಿಸಿ ಕಳ್ಳತನ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡಿದ್ದರು.