ಸೋಮವಾರಪೇಟೆ,ಫೆ.೨೦: ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಹಾಗೂ ಕಂದಾಯ ಇಲಾಖಾ ಸಚಿವ ಆರ್. ಅಶೋಕ್ ಅವರ ಚಿಂತನೆಯAತೆ ರಾಜ್ಯದಾದ್ಯಂತ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಜಾರಿಗೆ ತಂದಿದ್ದು, ಇದರಿಂದ ಜನಸಾಮಾನ್ಯರ ಸಮಸ್ಯೆಗಳು ಶೀಘ್ರ ಪರಿಹಾರ ಕಾಣಲಿವೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ತಾಲೂಕು ಕಂದಾಯ ಇಲಾಖೆ, ಜಿಲ್ಲಾಡಳಿತ, ತಾಲೂಕು ಆಡಳಿತದ ವತಿಯಿಂದ ಸಮೀಪದ ಐಗೂರು ವಿಎಸ್ಎಸ್ಎನ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, ಐಗೂರು ಗ್ರಾ.ಪಂ. ವ್ಯಾಪ್ತಿಯ ಐಗೂರು, ಯಡವಾರೆ, ಹಾರಂಗಿ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸುವ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಸರಕಾರವು ರೂಪಿಸಿರುವ ಇಂತಹ ಕಾರ್ಯಕ್ರಮದ ಪ್ರಯೋಜನವನ್ನು ಎಲ್ಲರೂ ಪಡೆಯಬೇಕು. ಹಾಗಾದಲ್ಲಿ ಮಾತ್ರ ವೃಥಾ ಕಚೇರಿಗಳಿಗೆ ಅಲೆಯುವದು ತಪ್ಪುತ್ತದೆ. ಮುಂದಿನ ದಿನಗಳಲ್ಲಿ ಸರ್ಕಾರದ ಎಲ್ಲಾ ಸೇವೆಗಳು ಇನ್ನಷ್ಟು ಸರಳೀಕೃತವಾಗಲಿದೆ. ಜಿಲ್ಲಾಧಿಕಾರಿಗಳೂ ಸಹ ಒಂದು ವಾರಗಳ ಕಾಲ ಒಂದೊAದು ತಾಲೂಕಿಗೆ ಭೇಟಿ ನೀಡಿ ಗ್ರಾಮವಾಸ್ತವ್ಯ ನಡೆಸಲಿದ್ದಾರೆ. ಇದರಿಂದಾಗಿ ಬಹುತೇಕ ಗ್ರಾಮೀಣ ಭಾಗದ ಸಾರ್ವಜನಿಕರ ಸಮಸ್ಯೆಗಳು ಇತ್ಯರ್ಥಗೊಳ್ಳಲಿವೆ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲೂಕು ತಹಶೀಲ್ದಾರ್ ಗೋವಿಂದರಾಜ್ ಮಾತನಾಡಿ, ಐಗೂರು ಗ್ರಾ.ಪಂ.ನ ಮೂರು ಗ್ರಾಮಗಳಿಗೆ ಸಂಬAಧಿಸಿದAತೆ ೯೪ಸಿ ಅಡಿಯಲ್ಲಿ ೨೩ ಹಕ್ಕುಪತ್ರ ವಿತರಣೆಗೆ ಕ್ರಮಕೈಗೊಳ್ಳಲಾಗಿದೆ. ಇದರಲ್ಲಿ ೮ ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, ಉಳಿದ ಫಲಾನುಭವಿಗಳು ನಿಗದಿತ ಹಣ ಪಾವತಿಸಿದ ನಂತರ ಹಕ್ಕುಪತ್ರ ವಿತರಿಸಲಾಗುವದು. ನಮೂನೆ ೫೦,೫೩,೫೭ರ ಅರ್ಜಿಗಳು ಪರಿಶೀಲನಾ ಹಂತದಲ್ಲಿದೆ. ೬೩ ಸಾಗುವಳಿ ಚೀಟಿಗೆ ಅನುಮೋದನೆ ನೀಡಲಾಗಿದೆ. ಸರಕಾರದ ಮೂಲಕ ಯಾವುದೇ ಪರಿಹಾರದ ಹಣ ನೀಡಬೇಕಾದರೆ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಕಡ್ಡಾಯವಾಗಿದೆ ಎಂದರು. ವೇದಿಕೆಯಲ್ಲಿ ಕುಶಾಲನಗರ ತಹಶೀಲ್ದಾರ್ ಪ್ರಕಾಶ್, ತಾಲೂಕು ಆರೋಗ್ಯಾಧಿಕಾರಿ ಶ್ರೀನಿವಾಸ್ ಉಪಸ್ಥಿತರಿದ್ದರು. ಸಭೆಯಲ್ಲಿ ಕಂದಾಯ, ಭೂ ಮಾಪನ, ಆಹಾರ, ಆರೋಗ್ಯ ಇಲಾಖೆ ಸೇರಿದಂತೆ ಇತರ ಇಲಾಖಾಧಿಕಾರಿಗಳು ಭಾಗವಹಿಸಿದ್ದರು.
ಪಹಣಿಯಲ್ಲಿನ ಲೋಪದೋಷಗಳ ತಿದ್ದುಪಡಿ, ಪೌತಿ ಖಾತೆ, ಇಂದಿರಾ ಗಾಂಧಿ ವೃದ್ಧಾಪ್ಯ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ, ಅಂತ್ಯ ಸಂಸ್ಕಾರ ಪರಿಹಾರ ಧನ, ಅಂಗವಿಕಲರ ವೇತನ, ರಾಷ್ಟಿçÃಯ ಕುಟುಂಬ ನೆರವು ಯೋಜನೆ, ಸರ್ಕಾರಿ ಜಮೀನು ಒತ್ತುವರಿ ತೆರವು, ಗ್ರಾಮಗಳಿಗೆ ಸ್ಮಶಾನ ಕಲ್ಪಿಸುವುದು, ಆಶ್ರಯ ಯೋಜನೆಯಡಿ ಜಮೀನು ಕಾಯ್ದಿರಿಸುವುದು, ಆಧಾರ್ ಕಾರ್ಡ್ನ ಅನುಕೂಲತೆ, ಮತದಾರರ ಪಟ್ಟಿ ಪರಿಷ್ಕರಣೆ, ಪ್ರಕೃತಿ ವಿಕೋಪದಿಂದ ಹಾನಿಯಾದ ವಾಸದ ಮನೆಗಳಿಗೆ ಪರಿಹಾರ, ಬೆಳೆ ಪರಿಹಾರ, ಸಕಾಲ ಯೋಜನೆಯ ಸೌಲಭ್ಯಗಳು, ಹದ್ದುಬಸ್ತು, ಪೋಡಿ ಮುಕ್ತ ಗ್ರಾಮ, ದರಖಾಸ್ತು ಮಂಜೂರಾದ ಜಮೀನುಗಳ ದುರಸ್ತಿ, ಪಡಿತರ ಚೀಟಿಯಲ್ಲಿನ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಯಿತು.