ಕೂಡಿಗೆ, ಫೆ. ೨೦: ಕೂಡಿಗೆ ಗ್ರಾಮ ಪಂಚಾಯಿತಿಯ ಪ್ರಥಮ ಮಾಸಿಕ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ಅವರ ಅಧ್ಯಕ್ಷತೆ ಯಲ್ಲಿ ನೂತನ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಪ್ರಮುಖವಾಗಿ ಬೇಸಿಗೆ ಸಮೀಪಿಸುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಸಭೆಯಲ್ಲಿ ಹಾಜರಿದ್ದ ಸರ್ವ ಸದಸ್ಯರು ಒಕ್ಕೊರಲಿನ ತೀರ್ಮಾನ ಕೈಗೊಂಡರು. ಅಲ್ಲದೆ ಬ್ಯಾಡಗೊಟ್ಟ ಗ್ರಾಮದಲ್ಲಿ ಕಸ ವಿಲೇವಾರಿ ಘಟಕವನ್ನು ತೆರೆಯುವ ವಿಷಯದ ಬಗ್ಗೆ ಚರ್ಚೆಗಳು ನಡೆದವು.
ಸಭೆಯಲ್ಲಿ ಹಾಜರಿದ್ದ ನೂತನ ಸದಸ್ಯರುಗಳು ತಮ್ಮ ವಾರ್ಡ್ನ ಕಾಮಗಾರಿಗಳ ಬಗ್ಗೆ ವಿಷಯಗಳನ್ನು ತಿಳಿಸಿದರು. ಸಭೆಗೆ ಬಂದ ಸಾರ್ವಜನಿಕರ ಅರ್ಜಿಗಳನ್ನು ಚರ್ಚಿಸಿ ಅವುಗಳಿಗೆ ಉತ್ತರ ನೀಡಲು ತೀರ್ಮಾನಿಸಲಾಯಿತು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಾಹಿತಿಯನ್ನು ಸಭೆಗೆ ನೀಡಿದರು.
ಈ ಸಂದರ್ಭ ಉಪಾಧ್ಯಕ್ಷೆ ಮೋಹಿನಿ ಸದಸ್ಯರುಗಳಾದ ಅರುಣರಾವ್, ಶಿವಕುಮಾರ್, ವಾಣಿ, ರತ್ನಮ್ಮ, ಹೆಚ್.ಎಸ್. ರವಿ, ಜಯಶ್ರೀ, ಪಲ್ಲವಿ, ಟಿ.ಪಿ. ಹಮೀದ್, ಕೆ.ಟಿ. ಗಿರೀಶ್, ಲಕ್ಮಿ, ಅನಂತ ಚಂದ್ರ, ಜಯಶೀಲ ಸೇರಿದಂತೆ ಕಾರ್ಯದರ್ಶಿ ಶಿಲ್ಪಾ ಹಾಜರಿದ್ದರು.