ಮಡಿಕೇರಿ, ಫೆ. ೨೦: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಸಮಿತಿ(ಸಿಐಟಿಯು) ವತಿಯಿಂದ ಬಜೆಟ್ ಅಧಿವೇಶನ ಚಲೋ ಕಾರ್ಯಕ್ರಮ ಮಾ. ೪ ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಎ.ಸಿ. ಸಾಬು ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ರೈತ ವಿರೋಧಿಯಾದ ಕೃಷಿ ಸಂಬAಧಿತ ತಿದ್ದುಪಡಿ ಮಸೂದೆಗಳು ಮತ್ತು ಕಾರ್ಮಿಕ ವಿರೋಧಿ ಸಂಹಿತೆಗಳನ್ನು ರದ್ದುಪಡಿಸಬೇಕು. ಈ ಹಿನ್ನೆಲೆ ಬಜೆಟ್ ಅಧಿವೇಶನ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯಿಂದ ಸಿಐಟಿಯು ಸಂಘಟನೆಯ ಅಡಿಯಲ್ಲಿ ನೋಂದಾವಣಿಗೊAಡ ಸಂಘಟನೆಯ ಸುಮಾರು ೨೦೦೦ಕ್ಕೂ ಅಧಿಕ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ರೈತ ವಿರೋಧಿಯಾಗಿರುವ ೩ ಕಾನೂನುಗಳನ್ನು ಹಿಂಪಡೆಯಬೇಕು. ಕೇಂದ್ರದ ಶಾಸನಗಳನ್ನು ತಿರಸ್ಕರಿಸಬೇಕು. ವಿದ್ಯುಚ್ಛಕ್ತಿ ಖಾಸಗೀಕರಣ ಕೈಬಿಡಬೇಕು. ಬೆಲೆ ಏರಿಕೆ ಆಧಾರದಲ್ಲಿನ ತುಟ್ಟಿ ಭತ್ಯೆಯೊಂದಿಗೆ ಎಲ್ಲಾ ವಿಭಾಗಗಳ ಕಾರ್ಮಿಕರಿಗೂ ಸಮಾನ ಕನಿಷ್ಟ ವೇತನ ರೂ ೨೪ ಸಾವಿರ ಜಾರಿ ಮಾಡಬೇಕು ಸೇರಿದಂತೆ ವಿವಿಧ ೩೦ ಬೇಡಿಕೆ ಆಗ್ರಹಿಸಿ ಕಾರ್ಯಕ್ರಮಕ್ಕೂ ಮುಂಚಿತವಾಗಿ ತಾ. ೨೨ ರಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮತ್ತು ತಾ. ೨೪ ರಂದು ವೀರಾಜ ಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಮಾಹಿತಿ ನೀಡಿದರು.
ಸಮಿತಿಯ ಉಪಾಧ್ಯಕ್ಷ ಪಿ.ಆರ್. ಭರತ್ ಮಾತನಾಡಿ, ದೇಶದ ಸಂಪದ್ಭರಿತ ಆಸ್ತಿಗಳನ್ನು ಕೇಂದ್ರ ಸರ್ಕಾರ ಖಾಸಗೀಕರಣ ಮಾಡುತ್ತಿದೆ. ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದ ಸರ್ಕಾರ ಇಂದು ಖಾಸಗೀಕರಣ ಮಾಡುವುದರ ಮೂಲಕ ಎಲ್ಲರ ಉದ್ಯೋಗ ಕಸಿದುಕೊಳ್ಳುತ್ತಿದೆ. ರೈತರ ಮತ್ತು ಕಾರ್ಮಿಕರ ವಿರುದ್ಧ ವಿವಿಧ ಕಾಯ್ದೆ ಜಾರಿಗೆ ಮಾಡಿ, ಜನವಿರೋಧಿ ನೀತಿ ಅನುಸರಿ ಸುತ್ತಿದೆ. ಕೊರೊನಾ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ಕೆಲಸ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಮಹದೇವ, ಖಜಾಂಚಿ ಹೆಚ್.ಬಿ. ರಮೇಶ್ ಇದ್ದರು.